ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಶ್ರೀನಿವಾಸ್ ಪ್ರಸಾದ್ ಗೆ ದುಂಬಾಲು ಬಿದ್ದ ಬಿಜೆಪಿ ನಾಯಕರು.

ಮೈಸೂರು, ಏಪ್ರಿಲ್,2,2024 (www.justkannada.in):  ಲೋಕಸಭಾ ಚುನಾವಣಾ ಕಣ ರಂಗೇರುತ್ತಿದ್ದು ಈ ಮಧ್ಯೆ ಚುನಾವಣಾ ರಾಜಕಾರಣಕ್ಕೆ ನಿವೃತ್ತ ಘೋಷಿಸಿರುವ ಸಂಸದ ಶ್ರೀನಿವಾಸ್ ಪ್ರಸಾದ್ ರನ್ನ ಇತ್ತೀಚೆಗೆ ಕಾಂಗ್ರೆಸ್ ನಾಯಕರ ಭೇಟಿಯಾಗಿ ಕಾಂಗ್ರೆಸ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ದರು. ಇದೀಗ ಶ್ರೀನಿವಾಸ್ ಪ್ರಸಾದ್  ಕುಟುಂಬಸ್ಥರು ಒಬ್ಬೊಬ್ಬರಾಗಿ ಕಾಂಗ್ರೆಸ್ ಸೇರುತ್ತಿದ್ದು ಈ ಕಾರಣದಿಂದ ಬಿಜೆಪಿಗೆ ದೊಡ್ಡ ಮಟ್ಟದ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಬರುವಂತೆ ಶ್ರೀನಿವಾಸ್ ಪ್ರಸಾದ್ ಗೆ ಬಿಜೆಪಿ ನಾಯಕರು ದುಂಬಾಲು ಬಿದ್ದಿದ್ದಾರೆ.

ನಾಳೆ ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ಬಾಲರಾಜ್‌ ನಾಮಪತ್ರ ಸಲ್ಲಿಸಲಿದ್ದು,  ನಾಮಪತ್ರ ಸಲ್ಲಿಸುವ ವೇಳೆ ಪ್ರಸಾದ್ ಪ್ರಸಾದ್ ಬಿಜೆಪಿಯಲ್ಲೆ ಇದ್ದಾರೆ ಎನ್ನುವ ಮೆಸೆಜ್ ಕೊಡಲು ಬಿಜೆಪಿ ಮುಂದಾಗಿದೆ.  ಈ‌ ಕಾರಣದಿಂದ  ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ನಾಳಿನ ನಾಮಪತ್ರ ಕಾರ್ಯಕ್ರಮಕ್ಕೆ ಬರುವಂತೆ ಬಿಜೆಪಿ ನಾಯಕರು ಒತ್ತಾಯ ದುಂಬಾಲು ಬಿದ್ದಿದ್ದಾರೆ.

ಈಗಾಗಲೇ ನಾಮಪತ್ರ ಸಲ್ಲಿಸುವ ಕಾರ್ಯಕ್ರಮದಲ್ಲಿ ಜೊತೆ ಇರುವ ಗಣ್ಯರ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದ್ದು, ಇದರಲ್ಲಿ ಶ್ರೀನಿವಾಸ್ ಪ್ರಸಾದ್ ಅವರ ಹೆಸರನ್ನು ಹಾಕಲಾಗಿದೆ. ಬಿ.ವೈ.ವಿಜಯೇಂದ್ರ, ಶ್ರೀನಿವಾಸ್ ಪ್ರಸಾದ್, ಎ.ನಾರಾಯಣ ಸ್ವಾಮಿ, ಸದಾನಂದಗೌಡ, ಅರವಿಂದ ಲಿಂಬಾವಳಿ, ಶೃತಿ ಅವರ ಹೆಸರಿರುವ ಪಟ್ಟಿಯನ್ನ ಬಿಜೆಪಿ ಬಿಡುಗಡೆಯಾಗಿದೆ. ಇದರಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಂತರ ಶ್ರೀನಿವಾಸ್ ಪ್ರಸಾದ್ ಹೆಸರು ಇದೆ.  ಹಾಲಿ ಸಂಸದ ಶ್ರೀನಿವಾಸ್ ಪ್ರಸಾದ್ ಬೆಂಬಲ ಪಡೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಎರಡಡೂ ಪಕ್ಷಗಳು ಪ್ರಯತ್ನಿಸುತ್ತಿವೆ.

Key words: BJP, leaders, Srinivas Prasad, nomination