ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಬಿಎಸ್ ವೈ ಭಾಗಿ.

ಬೆಂಗಳೂರು,ಸೆಪ್ಟಂಬರ್,21,2021(www.justkannada.in): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆಯುತ್ತಿದ್ದು, ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಗುತ್ತಿದೆ.

ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿರುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರು ಮತ್ತು ಬಿಜೆಪಿ ಶಾಸಕರು ಭಾಗಿಯಾಗಿದ್ದಾರೆ.

ಸದನದಲ್ಲಿ ವಿಪಕ್ಷಗಳ ಎದುರಿಸುವುದರ ಬಗ್ಗೆ ವಿಪಕ್ಷದ ಸದಸ್ಯರಿಗೆ ತಕ್ಕ ಉತ್ತರ ನೀಡುವ ಬಗ್ಗೆ ಕಾರ್ಯತಂತ್ರ ರೂಪಿಸಲು ಸಭೆಯಲ್ಲಿ ಚರ್ಚಿಸಲಾಗುತ್ತಿದೆ. ಇನ್ನು ಸದನದಲ್ಲಿ ಬೆಲೆ ಏರಿಕೆ, ದೇವಾಲಯ ತೆರವು ಪ್ರಕರಣ ಸೇರಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಚರ್ಚೆ ನಡೆಸಲಾಗುತ್ತಿದೆ.

Key words: BJP -Legislative Party- meeting – CM -Bommai.