ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ –ಜೆಡಿಎಸ್ ಮೈತ್ರಿ ಸುಳಿವು ನೀಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್.

ರಾಮನಗರ,ಜೂನ್,23,2023(www.justkannada.in): ಈ ಬಾರಿಯ ವಿಧಾನಸಭೆ ಚುನಾವಣೆ ಸೋಲನುಭವಿಸಿರುವ ರಾಜ್ಯ ಬಿಜೆಪಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಳೆದ ಬಾರಿಯಂತೆ  ಹೆಚ್ಚು ಸ್ಥಾನಗಳನ್ನ ತನ್ನ ತೆಕ್ಕೆಗೆ ತೆಗೆದುಕೊಳ್ಳಲು  ತಂತ್ರ ಹೆಣೆಯಲು ಯೋಚಿಸುತ್ತಿದೆ. ಈ ನಡುವೆ ಬಿಜೆಪಿ ಜೆಡಿಎಸ್  ಜೊತೆ ಹೊಂದಾಣಿಕೆ ಮಾಡಿಕೊಂಡು ಲೋಕಸಭಾ ಚುನಾವಣೆಗೆ ಹೋಗಲು ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಠಿ ನೀಡುವಂತೆ ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್  ಹೇಳಿಕೆಯೊಂದನ್ನ ನೀಡಿದ್ದಾರೆ.

ಹೌದು,  ಈ ಕುರಿತು ರಾಮನಗರದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್, ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆ ಆಗಬಹುದು. ಬದಲಾವಣೆ ಜೊತೆ ಚುನಾವಣೆ ಎದುರಿಸುತ್ತೇವೆ.  ಜೆಡಿಎಸ್ ಜತೆ ಮೈತ್ರಿ ಆಗಬಹುದು ಅಂದಿಕೊಂಡಿದ್ದೇನೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಗೆ ತಯಾರಿ ಆಗಲೇಬೇಕು. ಅತಿ ಹೆಚ್ಚು ಸಂಸದರನ್ನ ಲೋಕಸಭೆಗೆ ಕಳುಹಿಸಬೇಕು. ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿದರೇ ಸ್ಪರ್ಧಿಸುತ್ತೇನೆ. ಲೋಕಸಭೆ ಟಿಕೆಟ್​ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.

Key words: BJP – LokSabha –elections-Former minister- CP Yogeshwar -hinted – JDS- alliance.