ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚು: ಹಲವು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ- ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗರೆಡ್ಡಿ..

ಚಿಕ್ಕಬಳ್ಳಾಪುರ,ಏಪ್ರಿಲ್,18,2023(www.justkannada.in):  ಬಿಜೆಪಿಯಲ್ಲಿ ಗುಂಪುಗಾರಿಕೆ ಹೆಚ್ಚಾಗಿದ್ದು, ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್​​  ಸೇರ್ಪಡೆಯಾಗಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತಾನಾಡಿದ ಮಾಜಿ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿಗೆ 50-60 ಸ್ಥಾನ ಬಂದರೆ ಹೆಚ್ಚು. ವಿವಿಧ ಪಕ್ಷಗಳ ಮುಖಂಡರುಗಳನ್ನು ಯಡಿಯೂರಪ್ಪ ಬಿಜೆಪಿಗೆ ಕರೆ ತಂದಿದ್ದರು. ಆದರೆ ಬಿಜೆಪಿಯ ಇನ್ನೂ ಹಲವು ನಾಯಕರು ಕಾಂಗ್ರೆಸ್​​ ಸೇರಲಿದ್ದಾರೆ. ಬಿಜೆಪಿಗೆ ಭವಿಷ್ಯವಿಲ್ಲ ಅಂತಾ ನಾಯಕರಿಗೆ ಮನವರಿಕೆಯಾಗಿದೆ. ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ​​​ಗೆ ಸ್ಪಷ್ಟ ಬಹುಮತ ಬರುತ್ತದೆ. ಕಾಂಗ್ರೆಸ್​ 120ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್​ನಲ್ಲಿ ನಾನು ಹಿರಿಯ ನಾಯಕ. ನಾನು ಮುಖ್ಯಮಂತ್ರಿ ಹುದ್ದೆಗೆ ಅರ್ಹನಾಗಿದ್ದೇನೆ. ಆದ್ರೆ ಸ್ಪರ್ಧೆಯಲ್ಲಿ ಇಲ್ಲ ಎಂದು ರಾಮಲಿಂಗರೆಡ್ಡಿ ತಿಳಿಸಿದರು.

Key words: BJP-many leaders –will- join –Congress- KPCC Working President- Ramalingareddy