Friday, August 7, 2026

BDA Apartments

Home Front Page ಮಂತ್ರಿಗಿರಿಗಾಗಿ ಲಾಬಿ: ಸಿಎಂ ಬಿಎಸ್ ವೈ ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ ಬಿಜೆಪಿ...

ಮಂತ್ರಿಗಿರಿಗಾಗಿ ಲಾಬಿ: ಸಿಎಂ ಬಿಎಸ್ ವೈ ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ ಬಿಜೆಪಿ ಶಾಸಕ….

ಬೆಂಗಳೂರು,ಜ,9,2020(www.justkannada.in):  ಸಂಕ್ರಾಂತಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸುಳಿವು ನೀಡಿದ ಬೆನ್ನಲ್ಲೆ ಸಂಪುಟ ಸೇರ್ಪಡೆಯಾಗಲು ಹಲವು ಬಿಜೆಪಿ ಶಾಸಕರು ಲಾಬಿ ನಡೆಸುತ್ತಿದ್ದಾರೆ.

ಈ ನಡುವೆ ಹಾವೇರಿ ಶಾಸಕ ನೆಹರು ಓಲೇಕಾರ್ ಸಹ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದು ಇಂದು ಡಾಲರ್ಸ್ ಕಾಲೋನಿ ಸಿಎಂ ನಿವಾಸದಲ್ಲಿ ಸಿಎಂ ಬಿಎಸ್ ಯಡಿಯೂರನ್ನ ಭೇಟಿಯಾಗಿ ತಮಗೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದರು. ಈ ಹಿಂದೆ ಸ್ವಾಮೀಜಿ ಮತ್ತು ಬೆಂಬಲಿಗರ ಮೂಲಕ ಒತ್ತಡ ಹಾಕಿದ್ದ ಶಾಸಕ ನೆಹರು ಓಲೇಕಾರ್ ಇದೀಗ ಸಂಪುಟ ವಿಸ್ತರಣೆ ಹತ್ತಿರವಾಗುತ್ತಿದ್ದಂತೆ ನೇರವಾಗಿ ಸಿಎಂ ಬಿಎಸ್ ವೈ ಭೇಟಿಯಾಗಿದ್ದಾರೆ.

ಭೇಟಿ ವೇಳೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ಈಗಾಗಲೇ ಉಪಚುನಾವಣೆಯಲ್ಲಿ ಗೆಲವು ಸಾಧಿಸಿರುವ 9 ಮಂದಿ ಶಾಸಕರಿಗೆ ಸಚಿವ ಸ್ಥಾನ ಫಿಕ್ಸ್ ಆಗಿದೆ. ಇನ್ನು ಉಳಿದ  ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಲಾಬಿ ನಡೆಸುತ್ತಿದ್ದಾರೆ.

Key words: BJP- MLA -appealed – ministerial position- CM BS yeddyurappa