Wednesday, August 12, 2026

BDA Apartments

Home Front Page ಸಿಎಂ ಸಿದ್ದರಾಮಯ್ಯಗೆ ಪತ್ರ ಬರದು ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್

ಸಿಎಂ ಸಿದ್ದರಾಮಯ್ಯಗೆ ಪತ್ರ ಬರದು ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಅರವಿಂದ ಬೆಲ್ಲದ್

ಬೆಂಗಳೂರು,ಸೆಪ್ಟಂಬರ್,3,2024 (www.justkannada.in): ಸಿಎಂ ಸಿದ್ದರಾಮಯ್ಯ ವಿರುದ್ದ ಆಕ್ಷೇಪಾರ್ಹ ಪದ ಬಳಕೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಹಾಗೂ  ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್  ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

ಜಿಂದಾಲ್ ಅವರಿಗೆ ಕಡಿಮೆ ಬೆಲೆ ಭೂಮಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಆಗಸ್ಟ್ 24 ರಂದು ಬೆಂಗಳೂರಿನ ಪ್ಯಾಲೇಸ್ ಮೈದಾನದ ಬಳಿ ನಡೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಶಾಸಕ ಅರವಿಂದ ಬೆಲ್ಲದ್, ಕಡಿಮೆ ದರದಲ್ಲಿ ಭೂಮಿ ಕೊಡುವುದಕ್ಕೆ ಸಿದ್ದರಾಮಯ್ಯ ಅವರ ಅಪ್ಪನ ಮನೆ ಆಸ್ತಿನಾ ಎಂದು ಹೇಳಿದ್ದರು.

ಈ ಹೇಳಿಕೆ ವಿಚಾರವಾಗಿ ಇದೀಗ ಲಿಖಿತ ಪತ್ರ ಬರೆದು ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆ ಕೇಳಿರುವ  ಅರವಿಂದ ಬೆಲ್ಲದ್, ಆ ಪದ ಬಳಕೆ ನನಗೆ ಶೋಭೆ ತಂದಿರುವುದಿಲ್ಲ. ತಮಗೆ ಪತ್ರದ ಮೂಲಕ ಕ್ಷಮೆಯಾಚಿಸುತ್ತಿದ್ದೇನೆ ನನ್ನನ್ನ ಕ್ಷಮಿಸಿ ಎಂದು ಹೇಳಿದ್ದಾರೆ.

Key words: BJP MLA, Arvind Bellad, apologized, CM Siddaramaiah