ದೆಹಲಿ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಬಿಜೆಪಿ ಶಾಸಕ.

ನವದೆಹಲಿ,ಜೂನ್,12,2021(www.justkannada.in):  ಎರಡು ವರ್ಷ ನಾನೇ ಸಿಎಂ ಎಂದು ನಿನ್ನೆ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿಕೆ ನೀಡಿದ ಬೆನ್ನಲ್ಲೆ ಬಿಜೆಪಿ ಶಾಸಕ  ಅರವಿಂದ ಬೆಲ್ಲದ್ ದೆಹಲಿಗೆ ತೆರಳಿದ್ದು ಭಾರಿ ಕುತೂಹಲ ಉಂಟು ಮಾಡಿತ್ತು. ಇದೀಗ ದೆಹಲಿ ಭೇಟಿ ಬಗ್ಗೆ ಅವರೇ ಸ್ಪಷ್ಟನೆ ನೀಡಿದ್ದಾರೆ.jk

ಈ ಕುರಿತು ಇಂದು ಮಾತನಾಡಿರುವ ಶಾಸಕ ಅರವಿಂದ ಬೆಲ್ಲದ್, ಕುಟುಂಬದ ಖಾಸಗಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಾನು ದೆಹಲಿಗೆ ಭೇಟಿ ನೀಡಿದ್ದೇನೆ, ಕುಟುಂಬದ ಜತೆ ದೆಹಲಿಗೆ ಬಂದಿದ್ದೇನೆ.  ನನ್ನ ದೆಹಲಿಯ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಸ್ಪಷ್ಟನೆ ನೀಡಿದರು.

ನಾನು ರಾಷ್ಟ್ರೀಯ ನಾಯಕರ ಭೇಟಿಗಾಗಲಿ, ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ದೆಹಲಿಗೆ ಆಗಮಿಸಿಲ್ಲ. ನಾನು ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರೂ ಮಾಧ್ಯಮಗಳಲ್ಲಿ ರಾಜಕೀಯ ಬೆಳವಣಿಗೆಗಳ ಚರ್ಚೆಗೆ ದೆಹಲಿಗೆ ಬಂದಿದ್ದಾರೆ ಎನ್ನುವ ರೀತಿ ಸುದ್ದಿಯಾಗುತ್ತಿದೆ. ಯಾವುದೇ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲು ಬಂದಿಲ್ಲ ಎಂದು ಶಾಸಕ ಅರವಿಂದ್ ಬೆಲ್ಲದ್ ತಿಳಿಸಿದರು.

Key words: BJP –MLA-arvind bellad- clarifies- Delhi -visit.