Sunday, September 20, 2026

BDA Apartments

ಬಾಯಿ ಮುಚ್ಚಿಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ- ಮಾಜಿ ಕೇಂದ್ರ...
Home Front Page ಬಾಯಿ ಮುಚ್ಚಿಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ- ಮಾಜಿ ಕೇಂದ್ರ ಸಚಿವರ ವಿರುದ್ದ ಗುಡುಗಿದ...

ಬಾಯಿ ಮುಚ್ಚಿಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ- ಮಾಜಿ ಕೇಂದ್ರ ಸಚಿವರ ವಿರುದ್ದ ಗುಡುಗಿದ ಯತ್ನಾಳ್

ಬಾಯಿ ಮುಚ್ಚಿಕೊಂಡು ಇರದಿದ್ರೆ ನಿಮ್ಮ ಬಂಡವಾಳ ಬಯಲು ಮಾಡ್ತೀನಿ puli

ವಿಜಯಪುರ,ನವೆಂಬರ್,27,2024 (www.justkannada.in):  ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಉಂಟಾಗಿದ್ದು ತಮ್ಮ ವಿರುದ್ದ ಮಾತನಾಡಿದ್ದ ಕೇಂದ್ರ ಮಾಜಿ ಸಚಿವ ಡಿ.ವಿ ಸದಾನಂದಗೌಡರ ವಿರುದ್ದ  ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗುಡುಗಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಸದಾನಂದಗೌಡ ಬಾಯಿ ಮುಚ್ಚಿಕೊಂಡು ಇರಬೇಕು. ಇಲ್ಲದೆ ಹೋದರೆ ಅವರ ಬಂಡವಾಳ ಬಯಲು ಮಾಡ್ತೇನೆ. ಈ ಹಿಂದೆ ಇದೆ ಸದಾನಂದಗೌಡರು ಯಡಿಯೂರಪ್ಪ ವಿರುದ್ಧ ಕೆಟ್ಟದಾಗಿ ಮಾತನಾಡಿದ್ದಾರೆ, ಇಲ್ಲ ಎನ್ನೋದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ.. ಯಡಿಯೂರಪ್ಪ ಕುಟುಂಬದ ವಿರುದ್ಧ ಸದಾನಂದಗೌಡರು ಮಾತನಾಡಿರೋದನ್ನೆಲ್ಲ ಬಿಚ್ಚಿಡುತ್ತೇನೆ. ನನಗಿಂತ ಕೆಟ್ಟದಾಗಿ ಸದಾನಂದಗೌಡ ಮಾತನಾಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಹಾಗೆಯೇ ನಾನು ವಕ್ಫ್ ವಿರುದ್ಧ ಮಾತನಾಡಿದ್ದೇನೆ ಸದಾನಂದಗೌಡ ಯಾಕೆ ಗಾಬರಿಯಾಗಬೇಕು? ಸದಾನಂದಗೌಡರೇ ಗಾಬರಿಯಾಗಬೇಡಿ, ದೀಪ ಆರುವವರ ಬಗ್ಗೆ ನಾನು ಮಾತನಾಡಲ್ಲ… ಸದಾನಂದಗೌಡರ ದೀಪ ಆರುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ್ಧ ಮಾಜಿ ಕೇಂದ್ರ ಸಚಿವ ಡಿ.ವಿ ಸದಾನಂದಗೌಡರು,  ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿದ್ದು ಹೈಕಮಾಂಡ್, ಅವರನ್ನ ವಿರೋಧ ಮಾಡುವವರು ದೆಹಲಿಗೆ ಹೋಗಿ ಮಾತನಾಡಲಿ. ಅದನ್ನು ಬಿಟ್ಟು ಬೀದರ್ ನಲ್ಲಿ ನಿಂತು ತಮಟೆ ಬಾರಿಸುತ್ತಿದ್ದಾರೆ. ಅವರು ಎಲ್ಲರು ಹೈಕಮಾಂಡ್ ಗೆ ಹತ್ತಿರ ಇರೋರೇ.. ಈಗ ಬೀದಿಯಲ್ಲಿ ಮಾತನಾಡುತ್ತಿದ್ದಾರೆ ಅಂದರೆ ಅವರು ಯೋಗ್ಯರಲ್ಲ ಎಂದು ಯತ್ನಾಳ್ ಟೀಂ ವಿರುದ್ದ ಹರಿಹಾಯ್ದಿದ್ದರು.

Key words: keep, mouth, BJP, MLA, Basanagowda patil yatnal, former Union Minister