Friday, August 7, 2026

BDA Apartments

Home Front Page ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದ ಬಿಜೆಪಿ ಶಾಸಕ.

ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಅಂಡ್ ಟೀಮ್ ಕಾರಣ ಎಂದ ಬಿಜೆಪಿ ಶಾಸಕ.

ತುಮಕೂರು ,ಜೂನ್,8,2024 (www.justkannada.in): ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ & ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ  ಹೇಳಿಕೆ ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುರೇಶ್ ಗೌಡ,  ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರೆಯಬೇಕೆಂದು ಸಂಚು ರೂಪಿಸಲಾಗಿದೆ.   ಸಿದ್ದರಾಮಯ್ಯರ ಜೊತೆ ಇರುವ ಅಹಿಂದ ಟೀಮ್ ಸಂಚು ರೂಪಿಸಿ ಡಿಕೆ ಸುರೇಶ್ ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ, ಡಿಕೆ ಶಿವಕುಮಾರ್ ಸಿಎಂ ಕೂಡ ಆಗಲ್ಲ. ಈಗಾಗಲೇ ಕಾಂಗ್ರೆಸ್ ನಾಯಕರ ನಡುವೆ ಕಿತ್ತಾಟ ಶುರುವಾಗಿದೆ. ಬೆಳಗಾವಿಯಲ್ಲಿ ಈಗಾಗಲೇ ನಾಯಕರ ನಡುವೆ ಕಿತ್ತಾಟ ಪ್ರಾರಂಭವಾಗಿದೆ. ಈ ಸರ್ಕಾರ ಬಹಳ ದಿನ ಉಳಿಯಲ್ಲ ಎಂದರು. ಶೀಘ್ರದಲ್ಲೇ ಸರ್ಕಾರ ಪತನವಾಗಲಿದೆ ಎಂದು ಸುರೇಶ್ ಗೌಡ ಭವಿಷ್ಯ ನುಡಿದರು.

Key words: BJP MLA, CM Siddaramaiah, team, DK Suresh