ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಆಗ್ರಹಿಸಿದ ಬಿಜೆಪಿ ಶಾಸಕ…

ಮಡಿಕೇರಿ,ಜು,24,2020(www.justkannada.in):  ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೇ ತನಿಖೆಗೆ ಆಗ್ರಹಿಸಿದ್ದಾರೆ.jk-logo-justkannada-logo

ಹೌದು, ಕಾಂಗ್ರೆಸ್ ನ ಕೋವಿಡ್ ಕಿಟ್ ಖರೀದಿಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸಲಿ ಎಂದು ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.  ಕೋವಿಡ್ ಕಿಟ್ ಖರೀದಿಯಲ್ಲಿ 2ಸಾವಿರ ಅವ್ಯವಹಾರವಾಗಿದೆ. ಈ ಬಗ್ಗೆ ತನಿಖೆಗೆ ಆದೇಶಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದರು. ಆದರೆ ಕಾಂಗ್ರೆಸ್ ನಾಯಕರ ಆರೋಪವನ್ನ ತಳ್ಳಿಹಾಕಿ ನಿನ್ನೆ ಸುದ್ಧಿಗೋಷ್ಠಿ ನಡೆಸಿದ್ದ ಐವರು ಸಚಿವರು, ಕೋವಿಡ್ ಕಿಟ್ ಖರೀದಿಯಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಹೀಗಾಗಿ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ತನಿಖೆ ನಡೆಸುವುದಿಲ್ಲ ಎಂದಿದ್ದರು.

ಈ ಸಂಬಂಧ ಇಂದು ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ, ಬಿಜೆಪಿ ತನಿಖೆ ಮಾಡಲು ಹಿಂದೇಟು ಹಾಕುತ್ತಿರುವುದೇಕೆ..? ಎಂದು ಪ್ರಶ್ನಿಸಿದ್ದರು.

ಹೀಗಾಗಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ  ಬಿಜೆಪಿ ಶಾಸಕ ಅಪ್ಪಚ್ಚು ರಂಜನ್, ವಿಪಕ್ಷಗಳ ಆರೋಪಕ್ಕೆ ಸರ್ಕಾರ ಕೆಲವು ದಾಖಲೆಗಳನ್ನ ನೀಡಿದೆ. ಹಾಗೆಯೇ ಎಲ್ಲಾ ಆರೋಪಗಳಿಗೆ ದಾಖಲೆ ನೀಡಬೇಕಾಗುತ್ತದೆ. ಸರ್ಕಾರ 600 ಕೋಟಿ ಖರ್ಚು ಮಾಡಿದೆ. ಆದರೆ 4 ಸಾವಿರ ಕೋಟಿ ರೂ ಅವ್ಯವಹಾರ ನಡೆದಿದೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಅದ್ದರಿಂದ ಈ ಬಗ್ಗೆ ಸೂಕ್ತ ತನಿಖೆಯಾಗಲಿ. ತನಿಖೆ ಹೇಗೆ ಆಗಬೇಕು ಎಂಬುವುದನ್ನ ಸರ್ಕಾರ ನಿರ್ಧರಿಸಲಿ. ಸತ್ಯ ಯಾವುದು ಸುಳ್ಳು ಯಾವುದು ಎಂದು ತಿಳಿಯಲಿ ಎಂದು ಆಗ್ರಹಿಸಿದರು./

Key words: BJP MLA –demand- probe – Covid kit -purchase