ಸಿದ್ಧರಾಮಯ್ಯರನ್ನ ಭೇಟಿ ಮಾಡಿದ ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ.

ಬೆಂಗಳೂರು,ಅಕ್ಟೋಬರ್.15,2021(www.justkannada.in): ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ. ನಾನು ಬಿಜೆಪಿಯಲ್ಲೇ ಇರುತ್ತೇನೆ. ಬಿಜೆಪಿಯಲ್ಲೇ ಸ್ಪರ್ಧಿಸುತ್ತೇನೆ ಎಂದು ಬಿಜೆಪಿ ಶಾಸಕ ಕುಮಾರ್ ಬಂಗಾರಪ್ಪ ಸ್ಪಷ್ಟನೆ ನೀಡಿದರು.

 ಇಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರನ್ನ ಶಾಸಕ ಕುಮಾರ್ ಬಂಗಾರಪ್ಪ ಭೇಟಿಯಾಗಿ ಚರ್ಚಿಸಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತೇನೆ ಎಂಬುದು ಸುಳ್ಳು ಸುದ್ದಿ. ಕಾಂಗ್ರೆಸ್​ನ ಯಾವುದೇ ನಾಯಕರು ನನ್ನನ್ನು ಸಂಪರ್ಕಿಸಿಲ್ಲ. ಮಗಳ ಮದುವೆಗೆ ಆಹ್ವಾನಿಸಲು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಸಿದ್ದರಾಮಯ್ಯ  ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆ ಮಾಡಿಲ್ಲ. ಮುಂದಿನ ಬಾರಿಯೂ ಬಿಜೆಪಿಯಿಂದಲೇ ಸ್ಪರ್ಧಿಸುತ್ತೇನೆ ಎಂದರು.

ಡಿ.ಕೆ ಶಿವಕುಮಾರ್ ವಿರುದ್ಧ ಇಬ್ಬರು ಕಾಂಗ್ರೆಸ್ ಮುಖಂಡರ ಮಾತು ಕುರಿತು ಪ್ರತಿಕ್ರಿಯಿಸಿದ ಕುಮಾರ್ ಬಂಗಾರಪ್ಪ, , ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಬಾರದಿತ್ತು. ಡಿಕೆಶಿ ಭ್ರಷ್ಟಾಚಾರ ಮಾಡಿದ್ದಾರೋ, ಇಲ್ಲವೋ ನನಗೆ ಗೊತ್ತಿಲ್ಲ. ಆದರೆ ಕಾಂಗ್ರೆಸ್ ಮುಖಂಡರು ಹಾಗೆ ಮಾತನಾಡಿದ್ದು ತಪ್ಪು. ಯಾವುದೇ ವೇದಿಕೆಗಳಲ್ಲಿ ಮಾತಾಡುವಾಗ ಎಚ್ಚರ ವಹಿಸಬೇಕು ಎಂದು  ಹೇಳಿದರು.

Key words: BJP –MLA- Kumar Bangarappa -meets -Siddaramaiah.