ಡಿಸಿಎಂ ಹುದ್ದೆ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟ ಶಾಸಕ ಎಂ.ಪಿ ರೇಣುಕಾಚಾರ್ಯ…

ಬೆಂಗಳೂರು,ಡಿ,17,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆಗುತ್ತಿದ್ದಂತೆ ಸಚಿವ ಸ್ಥಾನ ಮತ್ತು ಡಿಸಿಎಂ ಹುದ್ದೆಗೆ  ಲಾಬಿ ಜೋರಾಗಿದ್ದು ಈ ನಡುವೆ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ  ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.

ಸಿಎಂ ಸ್ಥಾನದಲ್ಲಿ ಇರುವವರು ದುರ್ಲರಾಗಿದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ಸಿಎಂ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ ಸಮರ್ಥರಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಏಕೆ ಬೇಕು.  ಹೀಗಾಗಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ರೇಣುಕಾಚಾರ್ಯ,  ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ. ಈಗಿರುವ ಡಿಸಿಎಂ ಸ್ಥಾನ ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇವೆ ಎಂದು ಡಿಸಿಎಂ ಆಕಾಂಕ್ಷಿಗಳಿಗೆ ರೇಣುಕಾಚಾರ್ಯ ಟಾಂಗ್ ನೀಡಿದರು.

ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಸಚಿವ ಸ್ಥಾನ ಪಡೆಯುವುದಕ್ಕೆ ಎಲ್ಲಿ ಮನವಿ ಸಲ್ಲಿಸಬೇಕು. ಅಲ್ಲಿ ಸಲ್ಲಿಸುತ್ತೇನೆ. ಸಚಿವಸ್ಥಾನವನ್ನ ಹಾದಿಬೀದಿಯಲ್ಲಿ ಕೇಳುವುದಿಲ್ಲ ಎಂದು ಹೇಳಿದರು.

Key words: BJP MLA-MP Renukacharya, – gave -Tang – DCM aspirants.