Thursday, October 29, 2026

Dasara Wishes

Just Kannada DasraWishes_JK DasraWishes JK
Happy Dasara
Home Front Page ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಅರೆಸ್ಟ್

ಬೆಂಗಳೂರು, ಸೆಪ್ಟೆಂಬರ್​ ,20,2024 (www.justkannada.in):  ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣಕ್ಕೆ ಸಂಬಂಧಿದಂತೆ ಜಾಮೀನು ಪಡೆದು ಹೊರಬಂದಿದ್ದ ಆರ್​ಆರ್​ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನ ಮತ್ತೆ ಬಂಧಿಸಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನ ಬಂಧಿಸಿದ್ದಾರೆ. ಜಾಮೀನು ಪಡೆದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಶಾಸಕ ಮುನಿರತ್ನ ಬಂಧನವಾಗಿದೆ.

2020 ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.

ಸಂತ್ರಸ್ತೆ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಪರಪ್ಪನ ಅಗ್ರಹಾರದಲ್ಲೇ ಬಂಧಿಸಿದ್ದಾರೆ.

Key words: BJP ,MLA Muniratha, arrested, again