ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ

ಬೆಂಗಳೂರು,ಫೆಬ್ರವರಿ,15,2023(www.justkannada.in): ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಕೊಲೆಗೆ ಸುಪಾರಿ ಪಡೆದ ಆರೋಪದ ಮೇಲೆ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ.

ಹೊಳಲ್ಕೆರೆ ಪೊಲೀಸರು ಇಬ್ಬರನ್ನು ಬಂಧನ ಮಾಡಿದ್ದು, ಸತೀಶ್ ರೆಡ್ಡಿ ಹತ್ಯೆಗೆ 2ಕೋಟಿ ರೂ. ಸುಪಾರಿ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ಬಂಧಿತರನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನ ಟೀಮ್ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸ್ಕೆಚ್ ಹಾಕಿತ್ತು ಎನ್ನಲಾಗಿದೆ. ಹಲವು ದಿನಗಳಿಂದ  ಶಾಸಕ ಸತೀಶ್ ರೆಡ್ಡಿ ಅವರನ್ನ ಇಬ್ಬರು ಫಾಲೋ ಮಾಡುತ್ತಿದ್ದರು ಎನ್ನಲಾಗಿದೆ. ಇದೀಗ ಇಬ್ಬರನ್ನ ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಸತೀಶ್ ರೆಡ್ಡಿ, ‘ರಾಜಕೀಯ ಕಾರಣಕ್ಕಾಗಿ ಕೊಲೆಗೆ ಸುಪಾರಿ ನೀಡಿದ್ದಾರೆ ಎಂಬ ಮಾಹಿತಿ ಇದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ. ಇಂತಹ ಹತ್ಯೆ ಸ್ಕೆಚ್​ಗಳಿಗೆ ನಾನು ಭಯಪಡಲ್ಲ. ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ. ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ.ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮಾಡುತ್ತಿದ್ದಾರೆ ಎಂದಿದ್ದಾರೆ.

Key words: BJP –MLA- Satish Reddy -murder – Sketch- Two arrested