ಬಿಜೆಪಿ ಶಾಸಕ್ ಉದಯ್ ಗರುಡಾಚಾರ್ ಗೆ 2 ತಿಂಗಳು ಜೈಲು: ನಂತರ ಜಾಮೀನು ಮಂಜೂರು

ಬೆಂಗಳೂರು,ಅಕ್ಟೋಬರ್,13,2022(www.justkannada.in):  ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಪ್ರಕರಣದಲ್ಲಿ ಬಿಜೆಪಿ ಶಾಸಕ ಉದಯ್ ಗರುಡಾಚಾರ್ ​ಗೆ ಕೋರ್ಟ್  2 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.

ಚುನಾವಣಾ ಪ್ರಮಾಣಪತ್ರದಲ್ಲಿ ತಪ್ಪು ಮಾಹಿತಿ ಆರೋಪದ ಮೇಲೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ, ಬೆಂಗಳೂರಿನ ಚಿಕ್ಕಪೇಟೆ ಬಿಜೆಪಿ ಶಾಸಕ ಗರುಡಾಚಾರ್ ​ಗೆ 2 ತಿಂಗಳು ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಇಂದು(ಅಕ್ಟೋಬರ್. 13) ಆದೇಶ ಹೊರಡಿಸಿದೆ.

2 ಕ್ರಿಮಿನಲ್ ಪ್ರಕರಣ ಮಾಹಿತಿ ಹಾಗೂ ಕಂಪನಿಯ ಹುದ್ದೆಯ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿತ್ತು.ಈ ಸಂಬಂಧ ಹೆಚ್ ಜಿ ಪ್ರಶಾಂತ್ ಎಂಬುವವರು ದೂರು ದಾಖಲಿಸಿದ್ದರು.  ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 125 ಎ ಅಡಿ ಆರೋಪ ಸಾಬೀತಾಗಿದ್ದು ಕೋರ್ಟ್ ಶಾಸಕ್ ಉದಯ್ ಗರುಡಾಚಾರ್ ಜೈಲು ಶಿಕ್ಷೆ ವಿಧಿಸಿದೆ.

ಜಾಮೀನು ಮಂಜೂರು

3 ವರ್ಷಕ್ಕಿಂತ ಕಡಿಮೆ ಶಿಕ್ಷೆಯಾಗಿರುವ ಹಿನ್ನೆಲೆ ಶಾಸಕ ಉದಯ್ ಗರುಡಾಚಾರ್ ಅವರಿಗೆ ಜಾಮೀನು ನೀಡಿ 42ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. 25,000 ರೂಪಾಯಿ ಬಾಂಡ್, ಶ್ಯೂರಿಟಿ ಒದಗಿಸಲು ನ್ಯಾಯಾಧೀಶ ಜೆ.ಪ್ರೀತ್​ ಸೂಚನೆ ನೀಡಿದ್ದಾರೆ. ಇದರಿಂದ ಬಿಜೆಪಿ ಶಾಸಕ ಉದಯ್ ಗರುಡಾಚಾರ್​ಗೆ ಸದ್ಯ ರಿಲೀಫ್‌ ಸಿಕ್ಕಂತಾಗಿದೆ.

Key words: BJP MLA -Uday Garudachar- jailed – 2 months