ಮಲ್ಲಿಕಾರ್ಜುನ ಖರ್ಗೆ, ಸಿದ್ಧರಾಮಯ್ಯ ಆಯ್ತು ಈಗ ಡಿ.ಕೆ ಶಿವಕುಮಾರ್ ಭೇಟಿ ಮಾಡಿದ ಹೆಚ್.ವಿಶ್ವನಾಥ್.

ಬೆಂಗಳೂರು,ಡಿಸೆಂಬರ್,9,2022(www.justkannada.in): ಬಿಜೆಪಿಯಲ್ಲಿದ್ದರೂ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಪದೇ ಪದೇ ಕಿಡಿಕಾರುತ್ತಿದ್ದ  ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್  ಮರಳಿ ಕಾಂಗ್ರೆಸ್  ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ. ಹೌದು, ಇತ್ತೀಚೆಗಷ್ಟೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ಹೆಚ್.ವಿಶ್ವನಾಥ್ ನಂತರ  ವಿಪಕ್ಷ ನಾಯಕ ಸಿದ್ದರಾಮಯ್ಯರನ್ನ ಭೇಟಿಯಾಗಿದ್ದರು. ಇದೀಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದ ವಿಶ್ವನಾಥ್, ಆರೋಗ್ಯ ವಿಚಾರಿಸುವ ನೆಪದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಬಳಿಕ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಹಳ್ಳಿಹಕ್ಕಿ ವಿಶ್ವನಾಥ್, ಇಂದುಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ. ಶಿವಕುಮಾರ್‌ ಅವರ ನಿವಾಸಕ್ಕ ಭೇಟಿ  ನೀಡಿದ ಹೆಚ್. ವಿಶ್ವನಾಥ್‌, ಕೆಲಕಾಲ ಸಮಾಲೋಚನೆ ಸಹ ನಡೆಸಿದರು.

Key words: BJP-MLC-H.Vishwanath-meet-DK Shivakumar