Sunday, November 8, 2026

Dasara Wishes

Happy Dasara
Home Front Page ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ...

ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ ನಡ್ಡಾ.

ತುಮಕೂರು,ಜನವರಿ,5,2023(www.justkannada.in):  ರಾಜ್ಯ ಪ್ರವಾಸ ಕೈಗೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ ನಡ್ಡಾ ಇಂದು ತುಮಕೂರು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರಸ್ವಾಮೀಜಿಗಳ ಗದ್ದುಗೆ ದರ್ಶನ ಪಡೆದರು.

ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಳಿಕ ಸಿದ್ದಲಿಂಗ ಸ್ವಾಮೀಜಿಗಳನ್ನ ಭೇಟಿಯಾಗಿ ಜೆಪಿ ನಡ್ಡಾ ಅವರು ಆಶೀರ್ವಾದ ಪಡೆದರು.  ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಜೆ.ಸಿ ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದ ಬಿಜ...

Key words: BJP- National President -J.P. Nadda -visited -Siddhganga Mutt