ಬಿಜೆಪಿಗೆ ನನ್ನ ವಿರುದ್ಧ ರಾಜಕೀಯ ಹೋರಾಟ ಮಾಡುವ ಶಕ್ತಿ ಇಲ್ಲ‌- ಡಿ.ಕೆ ಶಿವಕುಮಾರ್ ಟೀಕೆ.

ಬೆಂಗಳೂರು,ಸೆಪ್ಟಂಬರ್,29,2022(www.justkannada.in): ಅಕ್ರಮ ಹಣ ವರ್ಗಾವಣೆ, ಆದಾಯ ಮೀರಿ ಆಸ್ತಿಗಳಿಗೆ ಆರೋಪದ ಮೇಲೆ ತಮ್ಮ ವಿರುದ್ಧ ಇಡಿ ಮತ್ತು ಐಟಿ ತನಿಖೆ ಕುರಿತು ಪ್ರತಿಕ್ರಿಯಿಸಿ ಬಿಜೆಪಿ ವಿರುದ್ಧ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗುಡುಗಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿ.ಕೆ ಶಿವಕುಮಾರ್, ಬಿಜೆಪಿಯವರಿಗೆ ನನ್ನ ವಿರುದ್ಧ ರಾಜಕೀಯ ಹೋರಾಟ ಮಾಡುವ ಶಕ್ತಿ ಇಲ್ಲ‌, ಹಾಗಾಗಿ ಸರ್ಕಾರಿ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾನು ಕಾನೂನನ್ನು ಗೌರವಿಸುವ ವ್ಯಕ್ತಿ. ನಿರುದ್ಯೋಗ, ಬೆಲೆ ಏರಿಕೆ ಹಾಗೂ ಇನ್ನಿತರೆ ಸಮಸ್ಯೆಗಳ ವಿರುದ್ಧ ಮಾತನಾಡುತ್ತಿರುವುದೇ ನನ್ನ ಅಪರಾಧ ಎಂದು ಬಿಜೆಪಿಗೆ ಕುಟುಕಿದ್ದಾರೆ.

Key words: BJP – no power –fight- against –me-D.K Shivakumar.