ಬಿಜೆಪಿ ಮಾಡಿದ ಪಿಕ್ ಪಾಕೆಟ್ ನಮ್ಮ ಮೇಲೆ ಹಾಕ್ತಿದೆ- ಡಿಸಿಎಂ ಡಿ.ಕೆ ಶಿವಕುಮಾರ್ ಟೀಕೆ.

 ಬೆಂಗಳೂರು,ಏಪ್ರಿಲ್, 23,2024 (www.justkannada.in): ಕಾಂಗ್ರೆಸ್ ವಿರುದ್ದ ಪಿಕೆ ಪಾಕೆಟ್ ಜಾಹೀರಾತು ನೀಡಿರುವ ಬಿಜೆಪಿಗೆ ಟಾಂಗ್ ಕೊಟ್ಟಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿ ಮಾಡಿದ ಪಿಕ್ ಪಾಕೆಟ್ ನಮ್ಮ ಮೇಲೆ ಹಾಕ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ನಾವು ನೀಡಿರುವ ಚೊಂಬಿನ ಜಾಹೀರಾತನ್ನು ಅರಗಿಸಿಕೊಳ್ಳುವುದು ಬಿಜೆಪಿಯವರಿಂದ ಇನ್ನೂ ಸಾಧ್ಯವಾಗಿಲ್ಲ. ಹೀಗಾಗಿ ನಮ್ಮ ಮೇಲೆ ಆರೋಪ ಮಾಡಿ ಜಾಹೀರಾತು ನೀಡುತ್ತಿದ್ದಾರೆ. ನಾವು ಪಿಕ್​ಪಾಕೆಟ್ ಮಾಡಿದ್ದೇವೆ ಅಂತ ಜಾಹೀರಾತು ನೀಡಿದ್ದಾರೆ. ಬಿಜೆಪಿಯವರು ಮಾಡಿದ ಪಿಕ್ ಪಾಕೆಟ್ ನಮ್ಮ ಮೇಲೆ ಹಾಕ್ತಿದ್ದಾರೆ. ಬಿಜೆಪಿಯವರಿಗೆ ನಾವು ನೀಡಿದ ಚೊಂಬನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.

ಬರ ಪರಿಹಾರ ನೀಡುವುದಾಗಿ ಕೇಂದ್ರ ಹೇಳಿದೆ, ನಮಗೆ ಪರಿಹಾರ ಸಿಗುತ್ತೆ. ನಮಗೆ ನ್ಯಾಯ ಸಿಗುತ್ತೆ. ಸಾಂಕೇತಿಕವಾಗಿ ಹೋರಾಟ ಪ್ರಾರಂಭಿಸಿದ್ದೇವೆ ಎಂದು  ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

Key words: BJP, pick pocket, DCM, DK Shivakumar