Saturday, August 22, 2026

BDA Apartments

Home Front Page ಕಾಂಗ್ರೆಸ್, ಜೆಡಿಎಸ್ ನಾಯಕರ ಐಟಿ ದಾಳಿಗೆ ಬಿಜೆಪಿ ಪ್ಲಾನ್: ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ

ಕಾಂಗ್ರೆಸ್, ಜೆಡಿಎಸ್ ನಾಯಕರ ಐಟಿ ದಾಳಿಗೆ ಬಿಜೆಪಿ ಪ್ಲಾನ್: ಲಕ್ಷ್ಮಿ ಹೆಬ್ಬಾಳ್ಕರ್ ಆರೋಪ

ಬೆಂಗಳೂರು, ಏಪ್ರಿಲ್ 30, 2023 (www.justkannada.in): ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಕಾಂಗ್ರೆಸ್ ಮುಖಂಡರ ಮೇಲೆ ಸುಳ್ಳು ಕೇಸು ಹಾಕುವ ಯತ್ನ ನಡೆದಿದೆ. ನನ್ನ ಕ್ಷೇತ್ರದಲ್ಲಿ ಮೂವರು ಮುಖಂಡರನ್ನು ಟಾರ್ಗೆಟ್ ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ದೂರಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮನೆಗಳ ಮೇಲೆ ಲೋಕಾಯುಕ್ತ ಮತ್ತು ಐಟಿ ಅಧಿಕಾರಿಗಳು ದಾಳಿ ನಡೆಸುವ ಮಾಹಿತಿ ಇದೆ. ನಮ್ಮ ಪಕ್ಷದ ಮುಖಂಡರ ಶಕ್ತಿ ತಡೆಯುವ ಪ್ರಯತ್ನ ನಡೆದಿದೆ ಎಂದಿದ್ದಾರೆ.

ಸುಮಾರು 50 ಜನರ ಮನೆಗಳ ಮೇಲೆ ಅಧಿಕಾರಿಗಳು ರೇಡ್ ಮಾಡುವ ಸಾಧ್ಯತೆ ಇದೆ. 50 ಅಭ್ಯರ್ಥಿಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷದವರೂ ಇದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.