ನಾನು ಯಾವುದೇ ರೇಸ್​ ನಲ್ಲಿ ಇಲ್ಲ: ಯಾವ ಹುದ್ದೆಯ ಆಕಾಂಕ್ಷಿಯೂ ಅಲ್ಲ- ಮಾಜಿ ಸಚಿವ ಸಿ.ಟಿ ರವಿ.

ಚಿಕ್ಕಮಗಳೂರು,ಜೂನ್,24,2023(www.justkannada.in):  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರು ಆಕಾಂಕ್ಷಿಗಳಾಗಿದ್ದು ಈ ಕುರಿತು ಪ್ರತಿಕ್ರಿಯಸಿರುವ ಮಾಜಿ ಸಚಿವ ಸಿ.ಟಿ ರವಿ, ನಾನು ಯಾವುದೇ ರೇಸ್​ ನಲ್ಲಿ ಇಲ್ಲ.  ಯಾವ ಹುದ್ದೆಯ ಆಕಾಂಕ್ಷಿಯೂ ಅಲ್ಲ ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ  ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ನಾನು ಯಾವುದೇ ರೇಸ್​ನಲ್ಲಿ ಇಲ್ಲ. ನಾನು ಈಗಿನ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದೇನೆ. ಕಾರ್ಯಕರ್ತ ಅನ್ನೋದನ್ನ ಯಾವತ್ತೂ, ಯಾರು ಕಿತ್ತುಕೊಳ್ಳಲು ಆಗುವುದಿಲ್ಲ. ಪಕ್ಷ ನನಗೆ ಎಕ್ಸ್ ಪೀರಿಯನ್ಸ್, ಎಕ್ಸ್ ಪೋಸ್ ಎರಡಕ್ಕೂ ಅವಕಾಶ ಮಾಡಿಕೊಟ್ಟಿದೆ. ಈ ಸಂದರ್ಭದಲ್ಲಿ ನಾನು ಯಾವ ಹುದ್ದೆಯ ಆಕಾಂಕ್ಷಿಯಲ್ಲ ಎಂದರು.

Key words: bjp-president-post- Former minister- CT Ravi.