ಬೆಂಗಳೂರು,ನವೆಂಬರ್,10,2025 (www.justkannada.in): ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯವನ್ನು ಖಂಡಿಸಿ ಬಿಜೆಪಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ನಗರದ ಶಿವಾನಂದ ಸರ್ಕಲ್ ಬಳಿ ಬಿಜೆಪಿ ರಾಜಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಅಶ್ವಥ್ ನಾರಾಯಣ್, ಎಂಎಲ್ ಸಿ ಸಿ.ಟಿ ರವಿ ಸೇರಿದಂತೆ ಹಲವು ಭಾಗಿಯಾಗಿದ್ದಾರೆ.
ಸಿಎಂ ಸಿದ್ದರಾಮಯ್ಯ ನಿವಾಸದ ಮುಂದೆ ಪ್ರತಿಭಟನೆಗೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.
ಪ್ರತಿಭಟನೆಯಲ್ಲಿ ಮಾತನಾಡಿದ ಆರ್.ಅಶೋಕ್, ಕರ್ನಾಟಕದ ಜೈಲುಗಳು ಭಯೋತ್ಪಾದಕರಿಗೆ ಸ್ವರ್ಗವಾಗಿದೆ. ಪಂಚತಾರ ಹೋಟೆಲ್ ಗಿಂತ ಹೆಚ್ಚು ಸೌಲಭ್ಯಗಳನ್ನ ಕಾಂಗ್ರೆಸ್ ನೀಡುತ್ತಿದೆ. ಕಾಂಗ್ರೆಸ್ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ ಎರಡು ವರ್ಷದಿಂದ ಜೈಲಿನಲ್ಲಿ ಭಯೋತ್ಪಾದಕನಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿದರು.
Key words: BJP, protest, against, government, jail, Royal hospitality







