Tuesday, September 15, 2026

BDA Apartments

Home Front Page ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ, ಆರ್.ಅಶೋಕ್ ಸೇರಿ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ, ಆರ್.ಅಶೋಕ್ ಸೇರಿ ಕಾರ್ಯಕರ್ತರು ಪೊಲೀಸರ ವಶಕ್ಕೆ.

ಬೆಂಗಳೂರು,ಜೂನ್,20,2023(www.justkannada.in):  ಗ್ಯಾರಂಟಿ ಘೋಷಿಸಿದಂತೆ ರಾಜ್ಯದ ಜನತೆಗೆ 10 ಕೆಜಿ ಅಕ್ಕಿ ನೀಡುವಂತೆ ಪಟ್ಟು ಹಿಡಿದು ಇಂದು ಬಿಜೆಪಿ ನಾಯಕರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ಮೌರ್ಯಸರ್ಕಲ್ ನಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಹೇಳಿದಂತೆ 10 ಕೆಜಿ ಅಕ್ಕಿ ಕೊಡಬೇಕು. ಅಕ್ಕಿ ವಿಚಾರದಲ್ಲಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದೆ. ಜನರ ದಾರಿ ತಪ್ಪಿಸುತ್ತಿದೆ ಎಂದು  ಪ್ರತಿಭಟನಾನಿರತ ಬಿಜೆಪಿ ನಾಯಕರು ಕಿಡಿಕಾರಿದರು.ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ protest protest 1

ಈ ವೇಳೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಚಿವ ಆರ್.ಅಶೋಕ್ ಸೇರಿ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.

Key words: BJP-protest -against –government- Former CM-Bommai-R.Ashok