Wednesday, September 2, 2026

BDA Apartments

Home Front Page ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ

ಬಿಡದಿ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹ: ಬಿಜೆಪಿ ಬೃಹತ್ ಪ್ರತಿಭಟನೆ

ಬೆಂಗಳೂರು,ಜುಲೈ,17,2026 (www.justkannada.in): ಭಾರೀ ವಿವಾದಕ್ಕೆ ಕಾರಣವಾಗಿರುವ ಬಿಡದಿ ಟೌನ್ ಶಿಪ್ ಯೋಜನೆಯನ್ನು  ಕೈಬಿಡುವಂತೆ  ಆಗ್ರಹಿಸಿ  ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ನಗರದ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಸುರೇಶ್ ಕುಮಾರ್, ಭೈರತಿ ಬಸವರಾಜು ಮುನಿರತ್ನ ಮಾಜಿ ಸಚಿವ ಶ್ರೀರಾಮುಲು . ವಿಧಾನಪರಿಷತ್ ಸದಸ್ಯ ಸಿಟಿ ರವಿ ಭಾಗಿಯಾಗಿದ್ದಾರೆ.

ರೈತ ವಿರೋಧಿ ಬಿಡದಿ ಟೌನ್ ಶಿಪ್ ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಇದು ಕಾಂಗ್ರೆಸ್ ಪಕ್ಷಕ್ಕೆ ಚಿನ್ನದ ಮೊಟ್ಟೆ ಇಡುವ ಯೋಜನೆಯಾಗಿದೆ.  ರೈತರ ವಿರೋಧವಿದ್ದರೂ ಯೋಜನೆ ಕೈಗೊಂಡಿದ್ದಾರೆ,  ಸ್ವಹಿತಾಸಕ್ತಿಯಿದೆ. ಇದರಿಂದ ಲಕ್ಷಾಂತರ ಜನರಿಗೆ ತೊಂದರೆ ಆಗುತ್ತಿದೆ ಎಂದರು.

Key words: BJP, protest, Bidadi Township,  project