ಬಿಜೆಪಿಗರು ಪ್ರತಿಭಟಿಸಲಿ:  ಎಲ್ಲದಕ್ಕೂ ಉತ್ತರ ಕೊಡುತ್ತೇನೆ- ಡಿಸಿಎಂ ಡಿ.ಕೆ ಶಿವಕುಮಾರ್.

ಬೆಂಗಳೂರು,ಅಕ್ಟೋಬರ್,16,2023(www.justkannada.in): ಪಂಚರಾಜ್ಯಗಳಿಗೆ ಕಾಂಗ್ರೆಸ್ ನಿಂದ ಹಣ ಪೂರೈಕೆ ಆರೋಪ ಮಾಡಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ. ಹೈವೋಲ್ಟೇಜ್ ​​​ಗೂ ಕೊಡುತ್ತೇವೆ, ಲೋವೋಲ್ಟೇಜ್ ​​ಗೂ ಉತ್ತರ ಕೊಡುತ್ತೇವೆ. ನಕಲಿಗೂ ಉತ್ತರಿಸುತ್ತೇವೆ, ಲೂಟಿಗಳಿಗೂ ಉತ್ತರ ಕೊಡುತ್ತೇವೆ.

ಎಲ್ಲ ವಿಚಾರಗಳ ಬಗ್ಗೆಯೂ ಬಿಚ್ಚಿಡುತ್ತೇನೆ. ಬಿಜೆಪಿಗರು ಪ್ರತಿಭಟಿಸಲಿ, ಲೂಟಿಕೊರರು ಪ್ರತಿಭಟನೆ ಮಾಡಲಿ. ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ತಿಳಿಸಿದರು.

Key words: BJP- protest- I will- answer – DCM -DK Shivakumar