Sunday, August 23, 2026

BDA Apartments

Home Front Page ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ

ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ

ಬೆಂಗಳೂರು, ಜುಲೈ 22, 2023 (www.justkannada.in): ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ವೈಫಲ್ಯ, ಶಾಸಕರ ಅಮಾನತು ವಿರೋಧಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸಭೆ ಅಧ್ಯಕ್ಷರು ಕಲಾಪವನ್ನು ಸರ್ವಾಧಿಕಾರಿಯಂತೆ ನಡೆಸಿದ್ದಾರೆ. ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿದ್ದಾರೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯ 10 ಶಾಸಕರನ್ನು ಅಮಾನತು ಖಂಡಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.  ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ.