ಬೆಂಗಳೂರಲ್ಲಿ ಬಿಜೆಪಿ ಪ್ರತಿಭಟನೆ: ಬಿಎಸ್ವೈ ಸೇರಿದಂತೆ ಶಾಸಕರು ಪೊಲೀಸರ ವಶಕ್ಕೆ

ಬೆಂಗಳೂರು, ಜೂನ್16, 2019 (www.justkannada.in): ಬೆಂಗಳೂರಿನಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಕಾವು ಸಾಕಷ್ಟು ಹೆಚ್ಚುತ್ತಿದೆ. ಇದೀಗ ಬೆಂಗಳೂರಿನ ಆನಂದರಾವ್ ಸರ್ಕಲ್ rally ಆರಂಭವಾಗಿದೆ.

ಸಿಎಂ ಗೃಹ ಕಚೇರಿಯತ್ತ ನೂರಾರು ಕಾರ್ಯಕರ್ತರು ಹಾಗೂ ಬಿಜೆಪಿ ನಾಯಕರು ಮೆರವಣಿಗೆಯಲ್ಲಿ ಸಾಗುತ್ತಿದ್ದಾರೆ. ಈ ವೇಳೆ ಧರಣಿನಿರತ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಶಾಸಕರು ಸೇರಿದಂತೆ ಬಿಎಸ್ ಯಡಿಯೂರಪ್ಪ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದುಕೊಂಡು ಹೋಗಿದ್ದಾರೆ.