ಬಿಜೆಪಿಯದ್ದು ಪಶ್ಚಾತ್ತಾಪದ ಪ್ರತಿಭಟನೆ-ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ. ​​​

ಬೆಂಗಳೂರು,ಜುಲೈ,5,2023(www.justkannada.in):  ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ಬಿಜೆಪಿ ನಾಯಕರು ಸದನದ ಒಳಗೆ ಮತ್ತು ಹೊರಗೆ ನಡೆಸಿದ ಪ್ರತಿಭಟನೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.

ಈ ಕುರಿತು ಸದನದಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್,  ಬಿಜೆಪಿ ಪ್ರತಿಭಟನೆ ಪಶ್ಚಾತ್ತಾಪದ ಪ್ರತಿಭಟನೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ದೆಹಲಿಯಲ್ಲಿ ಪ್ರತಿಭಟಿಸಿ. ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಧರಣಿ ನಡೆಸಲಿ ಎಂದು ಹೇಳಿದರು.

ತೈಲ ಬೆಲೆ ಕುಸಿದಿದ್ದರೂ ಪೆಟ್ರೋಲ್, ಡೀಸೆಲ್ ದರ ಇಳಿಸಿಲ್ಲ. ಕೇಂದ್ರ ಸರ್ಕಾರ ತೈಲ ಬೆಲೆ ಇಳಿಸದಿದ್ದರಿಂದ ಬೆಲೆ ಏರಿಕೆಯಾಗಿದೆ ಎಂದು  ಡಿಸಿಎಂ ಡಿ.ಕೆ.ಶಿವಕುಮಾರ್​ ಹೇಳಿದರು.

Key words: BJP- protest -repentance-DCM- DK Shivakumar