Friday, July 31, 2026

BDA Apartments

Home Front Page ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಮೋದಿ ಬಗ್ಗೆ ಖರ್ಗೆ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಭಿತ್ತಿಪತ್ರ ಹಿಡಿದು ಆಕ್ರೋಶ

ಬೆಂಗಳೂರು,ಏಪ್ರಿಲ್,23,2026 (www.justkannada.in):  ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಕ್ಷೇಪಾರ್ಹ ಹೇಳಿಕೆ ನೀಡಿದ್ದನ್ನು ಖಂಡಿಸಿ ರಾಜ್ಯ ಬಿಜೆಪಿ ನಾಯಕರು ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿದರು.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ದ ಭಿತ್ತಿಪತ್ರ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಶಾಸಕರು, ಸಂಸದರು ಎಂಎಲ್ ಸಿಗಳು ಸೇರಿ ಹಲವು ಮುಖಂಡರು ಭಾಗಿಯಾಗಿದ್ದರು.

Key words: BJP, protests, against, Mallikarjuna Kharge, statement