ರಾಜ್ಯದಲ್ಲಿ ನಡೆದ  ಹತ್ಯೆ  ಖಂಡಿಸಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ದೂರು.

ಬೆಂಗಳೂರು,ಜುಲೈ,12,2023(www.justkannada.in): ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಆರೋಪ, ರಾಜ್ಯದಲ್ಲಿ ನಡೆದ  ಹತ್ಯೆ  ಖಂಡಿಸಿ ಇಂದು ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ರಾಜ್ಯ ಸರ್ಕಾರದ ವಿರುದ್ದ ವಿಧಾನಸೌಧ ಆವರಣದ  ಗಾಂಧಿ ಪ್ರತಿಮೆ ಎದುರು ವಿಪಕ್ಷ ಬಿಜೆಪಿ ಪ್ರತಿಭಟನೆ ನಡೆಸಿತು. ಬಿಜೆಪಿ ವಿಧಾನಸಭೆ ಮತ್ತು ವಿಧಾನ ಪರಿಷತ್ ಸದಸ್ಯರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ  ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಬಳಿಕ ಮೆರವಣಿಗೆ ಮೂಲಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ  ಕಾನೂನು ಸುವ್ಯವಸ್ಥೆ ಸರಿಪಡಿಸುವ ಬಗ್ಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ದೂರು ಸಲ್ಲಿಸಿದರು.

ರಾಜ್ಯಪಾಲರ ಭೇಟಿ ಬಳಿಕ  ಮಾತನಾಡಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ,  ‘ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ವಿಫಲರಾಗಿದ್ದಾರೆ. ಜನಸಾಮಾನ್ಯರ ಕೊಲೆಗಳಾಗುತ್ತಿದೆ. ಕೊಲೆಗಡುಕರಿಗೆ ಯಾರ ಭಯವೂ ಇಲ್ಲ. ಆಡಳಿತ ವ್ಯವಸ್ಥೆ ಬದಲಾಗಿದೆ. ಆಡಳಿತ ಪಕ್ಷದಿಂದ ರಕ್ಷಣೆ ಸಿಗುತ್ತದೆ ಎಂಬ ಧೈರ್ಯ ಕೊಲೆಗಡುಕರಿಗೆ ಬಂದಿದೆ. ಸರ್ಕಾರಕ್ಕೆ ಸೂಕ್ತ ಎಚ್ಚರಿಕೆ ಕೊಡುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ ಎಂದರು.

Key words: BJP-protests -against – Congress Govt–Complaint – Governor