ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ: ಸರ್ಕಾರದ ವಿರುದ್ದ ಆಕ್ರೋಶ.

ಬೆಂಗಳೂರು,ಜೂನ್,17,2024 (www.justkannada.in):  ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದೆ.

ಇಂದು ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ ಹಲವು ಕಡೆಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಶಾಸಕರಾದ ಭೈರತಿ ಬಸವರಾಜ್ ಎಂಎಲ್ ಸಿ ರವಿ ಕುಮಾರ್ ಸಿ.ಟಿ ರವಿ ಭಾಗಿಯಾಗಿದ್ದಾರೆ.

ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕಳೆ ಎರಡು ದಿನದ ಹಿಂಎ ರಾಜ್ಯ ಸರ್ಕಾರ ಪೆಟ್ರೋಲ್ ದರ 3 ರೂ. ಡೀಸೆಲ್ ದರ 3.50 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಸರ್ಕಾರದ ದರ ಏರಿಕೆ ನಡೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದೆ.

Key words: BJP, protests, against, government, price, hike