Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಖಂಡಿಸಿ ಬಿಜೆಪಿ ಪ್ರತಿಭಟನೆ

ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೆಂಗಳೂರು,ಅಕ್ಟೋಬರ್,14,2024 (www.justkannada.in): ಹುಬ್ಬಳ್ಳಿ ಗಲಭೆ ಕೇಸ್  ವಾಪಸ್  ಪಡೆದ ರಾಜ್ಯ ಸರ್ಕಾರದ ನಿರ್ಧಾರವನ್ನ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆಗಿಳಿದಿದ್ದಾರೆ.

ಹುಬ್ಬಳ್ಳಿ ಕೇಸ್ ಹಿಂಪಡೆದಿದ್ದನ್ನು ಖಂಡಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ  ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಸಂಸದ ಗೋವಿಂದ ಕಾರಜೋಳ, ಎಂಎಲ್ ಸಿ ರವಿಕುಮಾರ್, ಶಾಸಕ ಅಶ್ವಥ್ ನಾರಾಯಣ್, ಎಸ್ ಆರ್ ವಿಶ್ವನಾಥ್,  ಗೋಪಾಲಯ್ಯ ಸೇರಿ ಮುಖಂಡರು,  ಕಾರ್ಯಕರ್ತರು ಭಾಗಿಯಾಗಿದ್ದಾರೆ.

ಹುಬ್ಬಳ್ಳಿ ಕೇಸ್ ವಾಪಸ್ ಪಡೆದಯಂತೆ ಪ್ರತಿಭಟನಾಕಾರರು ಸರ್ಕಾರದ ವಿರುದ್ದ ಘೋಷಣೆ ಕೂಗಿ  ಆಗ್ರಹಿಸಿದ್ದಾರೆ.

Key words: BJP, protests, against, Hubli, riot case