Thursday, August 20, 2026

BDA Apartments

Home Front Page ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಎಸ್ ವೈ ನೇತೃತ್ವದಲ್ಲಿ ಪ್ರತಿಭಟನೆ…

ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಬಿಎಸ್ ವೈ ನೇತೃತ್ವದಲ್ಲಿ ಪ್ರತಿಭಟನೆ…

ಬೆಂಗಳೂರು,ಜು,10,2019(www.justkannada.in): ಸಿಎಂ ಹೆಚ್.ಡಿ ಕುಮಾರಸ್ವಾಮಿ  ರಾಜೀನಾಮೆ ನೀಡುವಂತೆ ಆಗ್ರಹಿಸಿ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ರಾಜ್ಯ ಬಿಜೆಪಿ ನಾಯಕರು ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಧರಣಿಯಲ್ಲಿ ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ, ಜಗದೀಶ್ ಶೆಟ್ಟರ್ ಸೇರಿ ಶಾಸಕರು ಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ.

ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಬಹುಮತವಿಲ್ಲ.ಹೀಗಾಗಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಧರಣಿ ನಡೆಸುತ್ತಿದ್ದಾರೆ. ಅಪರೇಷನ್ ಕಮಲದ ಮೂಲಕ ಬಿಜೆಪಿ ನಾಯಕರು ನಮ್ಮ ಶಾಸಕರನ್ನ ಸೆಳೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರು ನಿನ್ನೆ ಪ್ರತಿಭಟನೆ ನಡೆಸಿದ್ದರು.

Key words: BJP-protests-demanding -resignation – CM HD Kumaraswamy