ಬೆಂಗಳೂರು,ಆಗಸ್ಟ್,24,2026 (www.justkannada.in): ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಜೆಡಿಎಸ್ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದೆ.
ಇಂದು ವಿಧಾನಮಂಡಲ ಉಭಯ ಸದನಗಳ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಬಿಜೆಪಿ-ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದು ಸಚಿವ ಸ್ಥಾನಕ್ಕೆ ಬಿ.ನಾಗಂದ್ರ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಿಸಲ್ಲ ಎಂದು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ವಿಧಾನಪರಿಷತ್ ನಲ್ಲಿ ಸರಕಾರದ ವಿರುದ್ದ ಧಿಕ್ಕಾರ ಘೋಷಣೆ ಕೂಗಿ ಬಿಜೆಪಿ ಸದಸ್ಯರು ಧರಣಿ ನಡೆಸಿದ್ದು ಈ ನಡುವೆಯೇ ಸ್ಪೀಕರ್ ಜಿ.ಎಸ್ ಪಾಟೀಲ್ ಅವರು ಪ್ರಶ್ನೋತ್ತರ ಕಲಾಪ ಆರಂಭಿಸಿದರು.
Key words: Demand, Minister, B. Nagendra, resignation, BJP, protests, Session







