ಬೆಂಗಳೂರು,ಡಿಸೆಂಬರ್,24,2025 (www.justkannada.in): ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ಎಂದು ನಾವ್ಯಾರು ಕೇಳಿಲ್ಲ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಇದ್ದಾರೆ. ಅವರನ್ನು ಬದಲಾವಣೆ ಮಾಡಿ ಎಂದು ನಾವ್ಯಾರು ಕೇಳಿಲ್ಲ. ವರಿಷ್ಠರು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ ಎಂದು ತಿಳಿಸಿದರು.
ಇದೇ ವೇಳೆ ಕಾಂಗ್ರೆಸ್ ವಿರುದ್ದ ಗುಡುಗಿದ ಆರ್.ಅಶೋಕ್, ಕಾಂಗ್ರೆಸ್ ಪಕ್ಷ ತನ್ನ ಆಂತರಿಕ ಕಚ್ಚಾಟದಿಂದ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ಜನತೆ ಇವರನ್ನು ಮನೆಗೆ ಶಾಶ್ವತವಾಗಿ ಕಳುಹಿಸುತ್ತಾರೆ. ಕಾಂಗ್ರೆಸ್ ಪಕ್ಷಕ್ಕೆ ಕೊಳ್ಳಿ ಇಡಲು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರೊಬ್ಬರೇ ಸಾಕು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಬ್ಬ ವೀಕ್ ಲೀಡರ್ ಎಂದು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆಯುತ್ತಾರೆ. ಪ್ರತಿದಿನ ಒಂದಿಲ್ಲೊಂದು ಕಚ್ಚಾಟ ನಡೆಯುತ್ತಲೇ ಇದೆ ಎಂದು ಟೀಕಿಸಿದರು.
Key words: not, change, BJP, state president, R. Ashok







