ಆರ್.ಶಂಕರ್ ಮನೆ ಮೇಲಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ- ಸಿಎಂ ಬೊಮ್ಮಾಯಿ.

ಹುಬ್ಬಳ್ಳಿ,ಮಾರ್ಚ್,15,2023(www.justkannada.in):  ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಆರ್.ಶಂಕರ್ ಮನೆ ಮೇಲಿನ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ತನಿಖಾ ಸಂಸ್ಥೆಗಳು ಎಷ್ಟು ಮುಕ್ತವಾಗಿವೆ ಅನ್ನೋದಕ್ಕೆ ಇದು ಸಾಕ್ಷಿ. ಯಾರೇ ತಪ್ಪು ಮಾಡಿದ್ರೂ ಸರ್ಕಾರ ಶಿಕ್ಷಿಸುವ ಕೆಲಸ ಮಾಡುತ್ತೆ. ಆರ್ .ಶಂಕರ್ ಕೇಸ್ ನಲ್ಲೂ ತನಿಖಾ ಸಂಸ್ಥೆ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹಾವೇರಿಯ ಬೀರೇಶ್ವರ ನಗರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್‌ ಮನೆ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.  ಶಂಕರ್‌ ಅವರ ಗೃಹ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಗೆ ವಿತರಣೆ ಮಾಡಲು ಸಂಗ್ರಹಿಸಿಟ್ಟಿದ್ದ ಶಂಕರ್‌ ಭಾವಚಿತ್ರ ಇರುವ ಸೀರೆ ಬಾಕ್ಸ್,‌ ತಟ್ಟೆ– ಲೋಟ ಹಾಗೂ ಎಲ್‌ ಕೆಜಿಯಿಂದ ಪದವಿ ಕಾಲೇಜುಗಳವರೆಗೆ ಹಂಚಲು ತಂದಿರುವ ಸ್ಕೂಲ್‌ ಬ್ಯಾಗ್‌ಗಳನ್ನು ವಶಪಡಿಸಿಕೊಂಡಿದ್ದರು.

Key words: BJP – R. Shankar- attack -Commercial -Tax –Department- CM Bommai.