ಬೆಂಗಳೂರು,ಆಗಸ್ಟ್,12,2025 (www.justkannada.in): ಮತ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಲಾಗಿತ್ತು ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ರಾಜ್ಯಸಭೆ ಸದಸ್ಯ ಲೇಹರ್ ಸಿಂಗ್ ಪತ್ರ ಬರೆದಿದ್ದಾರೆ.
2018ರ ಚುನಾವಣೆ ವೇಳೆ ಬದಾಮಿಯಲ್ಲಿ ಮತ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಲಾಗಿತ್ತು ಎಂಬ ಸಿಎಂ ಇಬ್ರಾಹಿಂ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸುವಂತೆ ಪತ್ರದಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಿಗೆ ರಾಜ್ಯಸಭೆ ಸದಸ್ಯ ಲೇಹರ್ ಸಿಂಗ್ ಮನವಿ ಮಾಡಿದ್ದಾರೆ.
2018ರಲ್ಲಿ ಬಾದಾಮಿ ಕ್ಷೇತ್ರದಲ್ಲಿ ಸಿದ್ದರಾಮಯ್ಯಗೆ ಸೋಲುವ ಭಯವಿತ್ತು. ಆ ವೇಳೆ ನಾವು ಹಣಕೊಟ್ಟು 3ಸಾವಿರ ವೋಟ್ ಖರೀದಿಸಿ ಸಿದ್ದರಾಮಯ್ಯರನ್ನ ಗೆಲ್ಲಿಸಿದ್ದವು ಎಂದು ಇತ್ತೀಚೆಗೆ ಮಾಜಿ ಕೇಂದ್ರ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದರು.
Key words: CM Ibrahim, statement, BJP Rajya Sabha, member, Central Election Commission