ನವದೆಹಲಿ,ಮಾರ್ಚ್,10,2022(www.justkannada.in): ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡ ಪಂಚರಾಜ್ಯಗಳ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಗೋವಾದಲ್ಲಿ ಆಡಳಿತರೂಢ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಪ್ರಬಲ ಪೈಪೋಟಿ ಉಂಟಾಗಿದೆ.
ಈ ನಡುವೆ ಗೋವಾದಲ್ಲಿ ಅಧಿಕಾರ ಹಿಡಿಯಲು 40 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಸ್ಥಾನ ಗಳಿಸಬೇಕು. ಇದೀಗ ಬಂದ ಮಾಹಿತಿ ಪ್ರಕಾರ ಬಿಜೆಪಿ 20 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಮ್ಯಾಜಿಕ್ ನಂಬರ್ ನತ್ತ ಸಾಗುತ್ತಿದೆ. ಕಾಂಗ್ರೆಸ್ 13 ಸ್ಥಾನಗಳೊಂದಿಗೆ ಬಿಜೆಪಿಗೆ ಫೈಟ್ ನೀಡುತ್ತಿದೆ. 1 ಎಎಪಿ 5 ಇತರೆ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇನ್ನು ಗೋವಾ ಸಿಎಂ ಪ್ರಮೋದ್ ಸಾವಂತ್ ಗೆ ಹಿನ್ನೆಡೆ ಅನುಭವಿಸಿದ್ದಾರೆ.
ಗೋವಾ ಉಸ್ತುವಾರಿಯಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೋವಾ ಕಾಂಗ್ರೆಸ್ ಉಸ್ತುವಾರಿಯಾಗಿ ಹಿರಿಯ ಮುಖಂಡ ದಿನೇಶ್ ಗುಂಡೂರಾವ್ ಕಾರ್ಯನಿರ್ವಹಿಸಿದ್ದರು.
Key words: BJP –reaches- magic number – Goa






