Monday, September 14, 2026

BDA Apartments

ಬಿಜೆಪಿಗೆ ಗುಡ್ ಬೈ: ಕಾಂಗ್ರೆಸ್ ಸೇರಿದ ಸಂಗಣ್ಣ ಕರಡಿ BDA JK_Adv BDA Adv
Home Front Page ಬಿಜೆಪಿಗೆ ಗುಡ್ ಬೈ: ಕಾಂಗ್ರೆಸ್ ಸೇರಿದ ಸಂಗಣ್ಣ ಕರಡಿ.

ಬಿಜೆಪಿಗೆ ಗುಡ್ ಬೈ: ಕಾಂಗ್ರೆಸ್ ಸೇರಿದ ಸಂಗಣ್ಣ ಕರಡಿ.

ಕೊಪ್ಪಳ,ಏಪ್ರಿಲ್,17,2024 (www.justkannada.in):  ಬಿಜೆಪಿಯಿಂದ  ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿದ್ದಸಂಗಣ್ಣ ಕರಡಿ ಅವರು ಇದೀಗ ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಕರಡಿ ಸಂಗಣ್ಣ ಅವರು ತಮ್ಮ ಬೆಂಬಲಿಗರೊಂದಿಗೆ  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್  ಸೇರಿದರು. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರು  ಸಂಗಣ್ಣ ಕರಡಿ ಅವರಿಗೆ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.ಬಿಜೆಪಿಗೆ ಗುಡ್ ಬೈ sanganna

ಈ ವೇಳೆ ಸಚಿವ ಶಿವರಾಜ್ ತಂಗಡಗಿ, ಶಾಸಕ ಲಕ್ಷ್ಮಣ್ ಸವದಿ,    ರಾಘವೇಂದ್ರ ಹಿಟ್ನಾಳ, ಬಸವರಾಜ ರಾಯರೆಡ್ಡಿ,  ಸೇರಿ ಹಲವರು ಉಪಸ್ಥಿತರಿದ್ದರು.

Key words: BJP, Sanganna Kardi, joins, Congress