ಬಿಎಸ್ ವೈ ಮನೆ ಮೇಲಿನ ದಾಳಿ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ- ಕಾಂಗ್ರೆಸ್ ಟೀಕೆ.

ಬೆಂಗಳೂರು,ಮಾರ್ಚ್,28,2023(www.justkannada.in):  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆದಿದ್ದರ ಹಿಂದೆ ‘ಸಂತೋಷ ಕೂಟ’ದ ಕೈವಾಡ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಆ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಬಿ.ಎಲ್. ಸಂತೋಷ್ ವಿರುದ್ಧ ಆರೋಪ ಮಾಡಿದೆ ಎನ್ನಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, BSY ಅವರು ಮುಖ್ಯಮಂತ್ರಿಯಲ್ಲ, ಸರ್ಕಾರದ ನಿರ್ಧಾರಗಳಲ್ಲಿ ಅವರ ಪಾತ್ರವಿಲ್ಲ, ಆದರೂ ಸರ್ಕಾರದ ಅವಾಂತರಕ್ಕೆ BSY ಮನೆ ಮೇಲೆ ದಾಳಿ ಆಗಿದ್ದೇಕೆ? ಗುಪ್ತಚರ ಇಲಾಖೆ, ಪೊಲೀಸ್ ಇಲಾಖೆ ಕಣ್ಮುಚ್ಚಿ ಕುಳಿತಿದ್ದೇಕೆ ಎನ್ನುವುದೇ ಯಕ್ಷಪ್ರಶ್ನೆ. BSY ಮನೆಯ ಮೇಲಿನ ದಾಳಿಯ ಹಿಂದೆ ಬಿಜೆಪಿಯ “ಸಂತೋಷ ಕೂಟ”ದ ಕೈವಾಡ ಇರುವುದು ನಿಶ್ಚಿತ ಎಂದು ಟ್ವೀಟ್ ಮಾಡಿ ಟಾಂಗ್ ನೀಡಿದೆ.

Key words: BJP-Santosh Koota- behind – attack – BSY’s house – Congress