ನಾಳೆ ಬಿಜೆಪಿ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ: ದಿಲ್ಲಿಗೆ ಬರುವಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್.

ಬೆಂಗಳೂರು,ಮಾರ್ಚ್,10,2024(www.justkannada.in): ಲೋಕಸಭೆ ಚುನಾವಣೆಗೆ ಈಗಾಗಲೇ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ನಾಳೆ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.

ಈ ಹಿನ್ನಲೆಯಲ್ಲಿ ಇಂದು ದಿಲ್ಲಿಗೆ ಬರುವಂತೆ ರಾಜ್ಯ ನಾಯಕರಿಗೆ ಹೈಕಮಾಂಡ್ ಬುಲಾವ್ ನೀಡಿದೆ. ಬಿಜೆಪಿ ಹೈಕಮಾಂಡ್ ಗೆ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯೇ ದೊಡ್ಡ ತಲೆನೋವಾಗಿದ್ದು ಇಂದು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದೆ.  ಸಭೆಯಲ್ಲಿ ಅಭ್ಯರ್ಥಿಗಳ ಕುರಿತು ಗಂಭೀರ ಚರ್ಚೆ ನಡೆಯಲಿದೆ.

ನಾಳೆ‌ ರಾಜ್ಯ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಅಭ್ಯರ್ಥಿಗಳ ಘೋಷಣೆಗೆ ಇನ್ನೊಂದು ಸುತ್ತಿನ ಮಾತುಕತೆಗೆ ಹೈಕಮಾಂಡ್ ಮುಂದಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಆರ್ ಅಶೋಕ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಗೆ ತೆರಳಿದ್ದಾರೆ.

ಇಂದು ಸಂಜೆ ಸಿಇಸಿ ಸಭೆ ನಡೆಯಲಿದ್ದು, ಅದಕ್ಕೂ ಮುನ್ನ ರಾಜ್ಯದ ನಾಯಕರ ಜೊತೆ ಪಕ್ಷದ ವರಿಷ್ಠರು ಮೂರನೇ ಸುತ್ತಿನ ಮಾತುಕತೆ ನಡೆಸಲಿದ್ದಾರೆ.  ರಾಜ್ಯದಲ್ಲಿ ಕೆಲವು ಹಾಲಿ ಸಂಸದರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ.

ಕ್ಷೇತ್ರದಲ್ಲಿ ಸರಿಯಾಗಿ ಕೆಲಸ ಮಾಡದೆ ಇರುವ ಕ್ಷೇತ್ರದ ಜನ ವಿರೋಧದ ಇರುವ ಸಂಸದರಿಗೆ ಟಿಕೆಟ್ ಕೈತಪ್ಪುವ ಸಂಭವವಿದೆ. ಇತ್ತ ಮೈಸೂರು ಕೊಡುಗು ಸಂಸದ ಪ್ರತಾಪ್ ಸಿಂಹಗೂ  ಟಿಕೆಟ್ ಕೈತಪ್ಪುತ್ತೆ ಎಂಬ ಸುದ್ದಿ ಹರಿದಾಡುತ್ತಿದ್ದು ಪ್ರತಾಪ್ ಸಿಂಹಗೆ ಟೆನ್ಸಷನ್ ತಂದಿಟ್ಟಿದೆ.

ಪ್ರತಾಪ್ ಸಿಂಹ ಬದಲಿಗೆ ರಾಜ ವಂಶಸ್ಥ ಯದುವೀರ್ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ.  ಮೈಸೂರು ಮಹಾರಾಜರು ಅಂದರೆ ಜನ ಸಾಮಾನ್ಯರಿಗೆ ಈಗಲೂ ಗೌರವವಿದೆ. ಇವರಿಗೆ ಟಿಕೆಟ್ ಕೊಟ್ಟರೆ ರಾಜ್ಯಾದ್ಯಂತ ಇವರ ಪ್ರಭಾವ ಬಿಜೆಪಿಗೆ ಸಿಗುತ್ತೆ ಎಂಬ ಲೆಕ್ಕಾಚಾರದಲ್ಲಿ ಬಿಜೆಪಿ ಇದೆ. ಇನ್ನು ಹಾಲಿ ಸಂಸದ ಪ್ರತಾಪ್ ಸಿಂಹಗೆ ಸ್ಥಳೀಯ ನಾಯಕರಿಂದಲೇ ವಿರೋಧ ವ್ಯಕ್ತವಾದ ಹಿನ್ನಲೆ, ಪ್ರತಾಪ್ ಸಿಂಹ ಭವಿಷ್ಯ ಡೋಲಾಯನಮಾನವಾಗಿದೆ.

Key words: BJP -second- list – released – High Command -state leaders – come – Delhi.