Saturday, August 22, 2026

BDA Apartments

Home Front Page ಸಿದ್ದರಾಮಯ್ಯ ಒಬ್ಬ’ಮನೆಮುರುಕ’: ಟ್ವಿಟ್ಟರ್’ನಲ್ಲಿ ಬಿಜೆಪಿ ಏಕವಚನದ ‘ಸರಣಿ’ ತಿರುಗೇಟು

ಸಿದ್ದರಾಮಯ್ಯ ಒಬ್ಬ’ಮನೆಮುರುಕ’: ಟ್ವಿಟ್ಟರ್’ನಲ್ಲಿ ಬಿಜೆಪಿ ಏಕವಚನದ ‘ಸರಣಿ’ ತಿರುಗೇಟು

ಬೆಂಗಳೂರು, ಅಕ್ಟೋಬರ್ 17, 2020 (www.justkannada.in): ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ‌ಬಿಜೆಪಿ ಏಕವಚನದಲ್ಲಿಯೇ ತಿರುಗೇಟು ನೀಡಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ‌ ಬಿಜೆಪಿ, ಮಾಜಿ ಸಿಎಂ ಸಿದ್ದರಾಮಯ್ಯ ಒಬ್ಬ ‘ಮನೆಮುರುಕ’ ಎಂದು ಬಿಜೆಪಿ ಕರ್ನಾಟಕ ಅಧಿಕೃತ ಖಾತೆಯಿಂದ ಸರಣಿ ಟ್ವೀಟ್ ಮಾಡಲಾಗಿದೆ.

ಹೀಗಿಗೆ ಬಿಜೆಪಿ ಸರಣಿ ಟ್ವೀಟ್ ಗಳು…
ಸಿದ್ದರಾಮಯ್ಯನವರೇ, ಮಾತೆತ್ತಿದರೆ ನಾನು ಹಳ್ಳಿಯವನು, ನಾನು ಮಾತನಾಡುವ ಶೈಲಿ ಹೀಗೆ ಎನ್ನುವ ನಿಮಗೆ ಗ್ರಾಮೀಣ ಸಂಸ್ಕೃತಿಯ ಅರಿವೇ ಇಲ್ಲ.
ಅನ್ಯರನ್ನು ಪ್ರೀತಿ, ಬಹುವಚನ, ಆದರದಿಂದ ಮಾತನಾಡುವುದು ಗ್ರಾಮೀಣ ಸಂಸ್ಕೃತಿ. ಆದರೆ ನಿಮ್ಮಂಥ ‘ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ.

ಅಪ್ಪ, ಅಜ್ಜಿ, ಮುತ್ತಾತ ಪ್ರಧಾನಿಯಾಗಿದ್ದರೆಂಬ ಕಾರಣಕ್ಕೆ ತಾನು ಪ್ರಧಾನಿಯಾಗಬೇಕೆಂದು ಓರ್ವ “ಹೆಬ್ಬೆಟ್ಟು” ಗಿರಾಕಿ ಕನಸು ಕಾಣುತ್ತಿದ್ದಾನೆ. ಸಿದ್ದರಾಮಯ್ಯನವರೇ, ಆತನ ಯೋಗ್ಯತೆ, ಅರ್ಹತೆ ಏನು ಎಂದು ವಿಚಾರಿಸಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.