ಘಟಾನುಘಟಿ ನಾಯಕರಿಗೆ ಹೀನಾಯ ಸೋಲು: ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ…

ಬೆಂಗಳೂರು,ಮೇ,23,2019(www.justkannada.in): ರಾಜ್ಯದಲ್ಲಿ ಘಟಾನುಘಟಿ ನಾಯಕರು ಸೋತಿದ್ದಾರೆ.  ಬಿಜೆಪಿಗೆ ಹೆಚ್ಚಿನ ಸ್ಥಾನ ನೀಡಿದ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು ದಾಖಲಿಸಿದ ಹಿನ್ನೆಲೆ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ರಾಜ್ಯದ ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಲ್ಲಿಕಾರ್ಜುನ ಖರ್ಗೆ, ಕೆಎಚ್ ಮುನಿಯಪ್ಪ,  ವೀರಪ್ಪಮೊಯ್ಲಿ ಹೀನಾಯವಾಗಿ ಸೋತಿದ್ದಾರೆ.  ಕರ್ನಾಟಕದಲ್ಲಿ ಸುಮಾರು ಶೇ. 54ರಷ್ಟು ಮತ ನೀಡಿ ಇತಿಹಾಸ ಸೃಷ್ಠಿಸಿದ್ದಾರೆ. ರಾಜ್ಯದ ಜನತೆಗೆ ಕೃತಜ್ಞತೆ ಸಲ್ಲಿಸುತ್ತಿರುವುದಾಗಿ ಹೇಳಿದರು.

ಹಾಗೆಯೇ ಪ್ರಧಾನಿ ಮೋದಿ ವಿರುದ್ದ ಏಕವಚನದಲ್ಲಿ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿಗೆ ಮುಖಭಂಗವಾಗಿದೆ. ಈಗಲಾದರೂ ರಾಹುಲ್ ಗಾಂಧಿ ಜನರ ಬಳಿ ಕ್ಷಮೆ ಕೇಳಲಿ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ಸೇತರ ಪಕ್ಷ ಬಿಜೆಪಿಗೆ ಇಷ್ಟೊಂದು  ಸ್ಥಾನ ಸಿಕ್ಕಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Key words: BJP state president BS Yeddyurappa congratulated the people of the state.

#Election2019 #result #bsyeddyurappa