ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್.

ಬೆಂಗಳೂರು,ಅಕ್ಟೋಬರ್,13,2023(www.justkannada.in): ಗುತ್ತಿಗೆದಾರ ಅಂಬಿಕಾಪತಿ ಮನೆಯಲ್ಲಿ 40 ಕೋಟಿ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ಧರಾಮಯ್ಯ,ಡಿಸಿಎಂ ಡಿ.ಕೆ ಶಿವಕುಮಾರ್ ರಾಜೀನಾಮೆ ನೀಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ನಳೀನ್ ಕುಮಾರ್ ಕಟೀಲ್, ಗುತ್ತಿಗೆದಾರ ಅಂಬಿಕಾಪತಿ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ ವೇಳೆ 40 ಕೋಟಿ ರೂ. ಪತ್ತೆಯಾಗಿದೆ.  ಕರ್ನಾಟಕದಲ್ಲಿ ಎಟಿಎಂ ಸರ್ಕಾರ ಕೆಲಸ ಮಾಡುತ್ತಿದೆ.  ಈ ಹಿಂದೆ 600 ಕೋಟಿ ರೂ ರಿಲೀಸ್ ಮಾಡಿತ್ತು. ಈಗ ಸಿಕ್ಕಿರುವ 40 ಕೋಟಿ ರೂ ಹಣ ಕಮಿಷನ್ ಹಣ ಎಂಬ ಮಾಹಿತಿ ಇದೆ.  ಹೀಗಾಗಿ ನೈತಿಕಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ಡಿಕೆ ಶಿವಕುಮಾರ್  ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಈ ಕುರಿತು ಮಾತನಾಡಿದ ಬಿಜೆಪಿ ಎಂಎಲ್ ಸಿ ಎನ್. ರವಿಕುಮಾರ್, ಗುತ್ತಿಗೆದಾರ ಸಂಘದವರು ಬಾಕಿ ಬಿಲ್​​ ಬಿಡುಗಡೆಗೆ ಒತ್ತಾಯಿಸಿದ್ದರು. ಸರ್ಕಾರ ಪರ್ಸೆಂಟೇಜ್ ಮಾತಾಡಿ 650 ಕೋಟಿ ರೂ. ಬಿಡುಗಡೆ ಮಾಡಿತ್ತು. 650 ಕೋಟಿ ರೂ. ಪೈಕಿ 42 ಕೋಟಿ ರೂ. ಕಮಿಷನ್ ಹಣ. ನೈತಿಕ ಹೊಣೆಹೊತ್ತು ಸಿದ್ದರಾಮಯ್ಯ, ಡಿಕೆ ಶಿವಕುಮಾರ್​​ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

Key words: BJP- state president -Naleen Kumar Kateel -demanded – resignation –CM-DCM