ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾಕೆ ಕೊಡಲ್ಲ, ನನಗೆ ಕೊಡಲೇಬೇಕು; ಮಾಜಿ ಸಚಿವ ವಿ.ಸೋಮಣ್ಣ

ಬೆಂಗಳೂರು,ಜೂನ್,23,2023(ww.justkannada.in): ರಾಜ್ಯ ಬಿಜೆಪಿಯಲ್ಲಿ ಮುಂದಿನ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದ್ದು ಈ ಮಧ್ಯೆ ಮಾಜಿ ಸಚಿವ ವಿ.ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾತನಾಡಿರುವ ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯಾಕೆ ಕೊಡಲ್ಲ, ನನಗೆ ಕೊಡಲೇಬೇಕು. ರಾಜ್ಯದ ಯಾವ ನಾಯಕರ ಜೊತೆಗೂ ನಾನು ಮಾತನಾಡಿಲ್ಲ. ಇವರ ಕೈಯಲ್ಲಿ ಆಗದ ಕೆಲಸ ನಾನು ಮಾಡಿದ್ದೇನೆ. ಪ್ರಾಣದ ಹಂಗು ತೊರೆದು ನಾನು ಪಕ್ಷಕ್ಕಾಗಿ ಕೆಲಸ ಮಾಡಿದ್ದೇನೆ. ನಾನು ಸೋತಿರಬಹುದು. ಆದರೆ, ಕೊಟ್ಟ ಟಾಸ್ಕ್​​ನಲ್ಲಿ ಸೋತಿಲ್ಲ ಎಂದಿದ್ದಾರೆ.

ಈ ನಡುವೆ ವಿ ಸೋಮಣ್ಣ  ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ಹೈಕಮಾಂಡ್​ಗೆ ಪತ್ರ ಬರೆದಿದ್ದಾರೆ ಎನ್ನಲಾಗಿದ್ದು 100 ದಿನ ಅವಕಾಶ ಕೊಟ್ಟು ನೋಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರಂತೆ.

ಈ ಬಗ್ಗೆ ಮಾತನಾಡಿದ ಅವರು, ನಮ್ಮ ಪಕ್ಷದ ರಾಷ್ಟ್ರೀಯ ನಾಯಕರಿಗೆ ಪತ್ರ ಬರೆದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನ ಕೇಳಿದ್ದು ನಿಜ. ನಾನು ಕೂಡ ಪಕ್ಷವನ್ನು ತುಂಬಾ ಹತ್ತಿರದಿಂದ ಬಲ್ಲವನಾಗಿದ್ದೇನೆ. ನನಗೆ ನನ್ನದೇ ಆದಂತ 45 ವರ್ಷದ ಅನುಭವವಿದೆ. ಬಿಜೆಪಿ ಕೊಟ್ಟ ಅನೇಕ ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದೇನೆ. ಕೆಟ್ಟ ಪರಿಸ್ಥಿತಿಯಲ್ಲಿ ಒಂದು ಅವಕಾಶ ಕೊಡಿ ಅಂತಾ ಕೇಳಿದ್ದೇನೆ. ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗಲು ಅವಕಾಶ ಕೇಳಿದ್ದೇನೆ ಎಂದರು.

Key words: BJP –state- president-position-Former minister- V. Somanna