Thursday, September 17, 2026

BDA Apartments

ಜನಾದೇಶಕ್ಕೆ ತಲೆಬಾಗೋಣ, ಸೋಲು ಗೆಲುವು ಸಮನಾಗಿ ಸ್ವೀಕರಿಸೋಣ ಎಂದ ಸಿಎಂ ಪುತ್ರ...
Home Front Page ಜನಾದೇಶಕ್ಕೆ ತಲೆಬಾಗೋಣ, ಸೋಲು ಗೆಲುವು ಸಮನಾಗಿ ಸ್ವೀಕರಿಸೋಣ ಎಂದ ಸಿಎಂ ಪುತ್ರ ವಿಜಯೇಂದ್ರ

ಜನಾದೇಶಕ್ಕೆ ತಲೆಬಾಗೋಣ, ಸೋಲು ಗೆಲುವು ಸಮನಾಗಿ ಸ್ವೀಕರಿಸೋಣ ಎಂದ ಸಿಎಂ ಪುತ್ರ ವಿಜಯೇಂದ್ರ

ಬೆಂಗಳೂರು, ಮೇ 02, 2021 (www.justkannada.in): ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ ಎಂದು ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.

ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮಮೇಲಿದೆ ಎಂದು ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ.

ಕಾರ್ಯಕರ್ತನಾಗಿ ಸದಾ ನಿಮ್ಮೊಂದಿಗಿರುವೆ. ಬಿಜೆಪಿ ಬೆಂಬಲಿಸಿದ ಮತದಾರ ಬಂಧುಗಳಿಗೆ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.