Wednesday, August 12, 2026

BDA Apartments

Home Front Page ಉಪಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರ: ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಏನಂದ್ರು ಗೊತ್ತೆ..?

ಉಪಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ ವಿಚಾರ: ಈ ಬಗ್ಗೆ ಡಿಸಿಎಂ ಲಕ್ಷ್ಮಣ್ ಸವದಿ ಏನಂದ್ರು ಗೊತ್ತೆ..?

ಬೆಂಗಳೂರು,ನ.15,2019(www.justkannada.in):  ಉಪಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ನನಗೆ ಬಿಜೆಪಿ ಟಿಕೆಟ್ ಕೈ ತಪ್ಪಿರುವುದಕ್ಕೆ ಯಾವುದೇ ರೀತಿಯ ಅಸಮಾಧಾನವಿಲ್ಲ. ನನ್ನ ಮುಂದಿನ ರಾಜಕೀಯ ಭವಿಷ್ಯವನ್ನು ಹೈಕಮಾಂಡ್ ತೀರ್ಮಾನಿಸುತ್ತದೆ. ಡಿಸಿಎಂ ಲಕ್ಷ್ಮಣ್ ಸವದಿ  ತಿಳಿಸಿದರು.

ಟಿಕೆಟ್ ಕೈತಪ್ಪಿದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ,  ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಅಸಮಾಧಾನ ಇಲ್ಲ. ಆದ್ರೆ ಕಾರ್ಯಕರ್ತರಲ್ಲಿ ಅಸಮಾಧಾನ ಇರೋದು ನಿಜ. ನಾನು ಪಕಿ್ಷದ ಶಿಸ್ತಿನ ಸಿಪಾಯಿ.   ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆಯೂ ಅವರ ಪರವಾಗಿ ಕೆಲಸ ಮಾಡುತ್ತೇನೆ  ನನ್ನ ವೈಯಕ್ತಿಕ ಹಿತಾಸಕ್ತಿ ಏನೇ ಇರಲಿ ಪಕ್ಷದ ಗೆಲುವು ಮುಖ್ಯ ಎಂದು ತಿಳಿಸಿದರು.

ಈಗ ಕ್ಷೇತ್ರ ಕೈತಪ್ಪಿ ಹೋಗಿದೆ. ಒಂದು ಬಾರಿ ಕ್ಷೇತ್ರ ಕೈತಪ್ಪಿ ಹೋದರೆ ಅದನ್ನು ಮರಳಿ ಪಡೆಯುವುದು ಭಾರೀ ಸಾಹಸದ ಕೆಲಸವೇ ಸರಿ. ಬೇರೆ ಕ್ಷೇತ್ರ ಹುಡುಕುವ ಅನಿವಾರ್ಯವಿದೆ. ನನ್ನ ರಾಜಕೀಯ ಒಲವು, ನಿಲುವು ಏನೇ ಇರಲಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ. ನಾಣು ಪಕ್ಷ ವಿರೋಧಿ ಕೆಲಸ ಮಾಡಲ್ಲ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದರು.

Key words: BJP-ticket- by-elections-DCM -Laxman Savadi