2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ: ಬಿಹಾರ ಸಿಎಂ ನಿತೀಶ್ ಕುಮಾರ್ ಭವಿಷ್ಯ

ಬೆಂಗಳೂರು, ಸೆಪ್ಟೆಂಬರ್ 04, 2022 (www.justkannada.in): 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನಿತೀಶ್‌ ಕುಮಾರ್‌  ಭವಿಷ್ಯ ನುಡಿದಿದ್ದಾರೆ.

ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿರುವನಿತೀಶ್ ಕುಮಾರ್,  2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಹೇಳಿದ್ದಾರೆ.

ಎಲ್ಲ (ವಿರೋಧ) ಪಕ್ಷಗಳು ಒಟ್ಟಾಗಿ ಹೋರಾಡಿದರೆ, ಬಿಜೆಪಿಯು ಸುಮಾರು 50 ಸ್ಥಾನಗಳಿಗೆ ಕುಸಿಯುತ್ತದೆ. ನಾನು ಆ ಅಭಿಯಾನಕ್ಕೆ ನನ್ನನ್ನು ಮೀಸಲಿಡುತ್ತಿದ್ದೇನೆ ಎಂದಿದ್ದಾರೆ.

ಈ ಹೇಳಿಕೆಗೆ ಪೂರಕವಾಗಿ ಸೆಪ್ಟೆಂಬರ್‌ 5ರಂದು ನಿತೀಶ್‌ ಕುಮಾರ್‌ ದೆಹಲಿ ಪ್ರವಾಸ ಮಾಡಲಿದ್ದು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಎಲ್ಲಾ ರಾಜಕೀಯ ನಾಯಕರನ್ನು ಭೇಟಿಯಾಗಲಿದ್ದಾರೆ.

ಸಕಾರಾತ್ಮಕ ಜನಾದೇಶಕ್ಕಾಗಿ 2024 ರಲ್ಲಿ ಎಲ್ಲಾ ಪಕ್ಷಗಳು ಒಂದಾಗಬೇಕು” ಎಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.