ಮಂಡ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ, ಇದು ಮುಂದುವರಿಯಲಿದೆ: ಕೆಆರ್ ಪೇಟೆ ಶಾಸಕ ಡಾ.ನಾರಾಯಣಗೌಡ

ಬೆಂಗಳೂರು, ಡಿಸೆಂಬರ್ 12, 2019 (www.justkannada.in): ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಕೆ.ಆರ್.ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಜನ್ಮಭೂಮಿಯಲ್ಲಿ ಬಿಜೆಪಿ ಪಾರುಪಾತ್ಯ ಸ್ಥಾಪಿಸಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ಮಾಡಿ ಈಗ ಸುಮ್ಮನಾಗಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಖಾತೆ ವಿವೇಚನೆ ಸಿಎಂಗೆ: ಬೆಂಗಳೂರಿನಲ್ಲಿ ಶಾಸಕ ಭೈರತಿ ಬಸವರಾಜ್ ಸುದ್ದಿಗಾರರೊಂದಿಗೆ ಮಾತನಡಿದ್ದಾರೆ. ಕೆ.ಆರ್.ಪುರಂ ಕ್ಷೇತ್ರದ ಜನತೆ ದಾಖಲೆ ಅಂತರದಲ್ಲಿ ನನಗೆ ಗೆಲುವು ನೀಡಿದ್ದಾರೆ. ನನಗೆ ಸಚಿವ ಸ್ಥಾನ ಸಿಗುವುದು ಖಚಿತ.‌ ಯಾವ ಖಾತೆ ನೀಡಬೇಕೆಂಬುದು ಮುಖ್ಯಮಂತ್ರಿ ಗಳ ವಿವೇಚನೆಗೆ ಬಿಟ್ಟಿದ್ದು. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಯಾವ ಜವಾಬ್ದಾರಿ ನೀಡಿದರೂ ಸಮರ್ಥವಾಗಿ ನಿಬಾಯಿಸುತ್ತೇನೆ ಎಂದು ಭೈರತಿ ಬಸವರಾಜ್ ಹೇಳಿದ್ದಾರೆ.