ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು : ವಿಶ್ವಾಸ ವ್ಯಕ್ತಪಡಿಸಿದ ಸಚಿವ ಕೆ.ಎಸ್ ಈಶ್ವರಪ್ಪ..

ಶಿವಮೊಗ್ಗ,ನವೆಂಬರ್,3,2020(www.justkannada.in):  ಇಂದು ಆರ್,ಆರ್ ನಗರ ಮತ್ತು ಶಿರಾ ಕ್ಷೇತ್ರಕ್ಕೆ ಉಪಚುನಾವಣೆ ಮತದಾನ ನಡೆಯುತ್ತಿದ್ದು ಈ ನಡುವೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.jk-logo-justkannada-logo

ಶಿವಮೊಗ್ಗದಲ್ಲಿಂದು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ,  ಆರ್.ಆರ್.ನಗರ ಮತ್ತು ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಬಿಜೆಪಿ ಸಂಘಟನಾತ್ಮಾಕವಾಗಿ ಪ್ರಬಲವಾಗಿದ್ದು, ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರಿಗೆ ಮನವಿ ಮಾಡಿದ್ದಾರೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲ್ಲುವ ವಿಶ್ವಾಸವಿದೆ ಎಂದರು.bjp-wins-by-election-two-constituencies-minister-ks-eshwarappa

ಎರಡು ಶಿಕ್ಷಕರ ಮತ್ತು ಎರಡು ಪದವೀಧರರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.  ಹಿಂದೆಂದೂ ಆಗದಷ್ಟು ಕೆಲವೆಡೆ ಶೇ.85ಕ್ಕೂ ಹೆಚ್ಚು ಮತದಾನವಾಗಿದೆ.  ಅದ್ದರಿಂದ ವಿಧಾನಪರಿಷತ್ ಚುನಾವಣೆ ನಡೆದ 4 ಕ್ಷೇತ್ರಗಳಲ್ಲಿಯೂ ಬಿಜೆಪಿ  ಗೆಲುವು ಸಾಧಿಸಲಿದೆ ಎಂದು ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

Key words: BJP -wins -by-election -two constituencies-Minister- KS Eshwarappa